ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ದೇವೇಗೌಡರ ಕರೆ

Social Share

ಬೆಂಗಳೂರು,ಡಿ.11- ರಾಷ್ಟ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಾವು ಮುಂದಿನ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಜೆಡಿಎಸ್ ಕಾರ್ಯಕರ್ತರಿಗೆ ಸಲಹೆ ಮಾಡಿದರು.
ಜೆಪಿ ಭವನದಲ್ಲಿಂದು ನಡೆದ ಕಾಂಗ್ರೆಸ್ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಅನೇಕ ರೀತಿಯ ಘಟನೆಗಳು ನಡೆಯುತ್ತಿದ್ದು,

ಅವುಗಳನ್ನು ಗಮನದಲ್ಲಿರಿಸಿಕೊಂಡು ನಾವು ಹೆಜ್ಜೆ ಇಡಬೇಕಿದೆ. ನಾವು ಮುಂದೆ ಕಾಲು ಇಡುವಾಗ ರಾಷ್ಟ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಕಡೆಗೆ ಗಮನಿಸಬೇಕಿದೆ ಎಂದು ಹೇಳಿದರು.

ಬೇರೆ ಬೇರೆ ರಾಜ್ಯದಲ್ಲಿ ಏನೇನು ಆಗುತ್ತಿದೆ ಎಂಬುದನ್ನು ನಾವು ನೋಡಿಕೊಂಡು ಹೆಜ್ಜೆ ಇಡಬೇಕು. ನಮ್ಮನ್ನು ಬಿಟ್ಟು ಹೋದವರು ಅವರ ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕಾರ್ಯಕರ್ತರು ನಮಗೆ ಹೋರಾಟದ ಹಾಗೂ ಪಕ್ಷ ಸಂಘನೆಯ ಶಕ್ತಿ ಕೊಟ್ಟಿದ್ದಾರೆ.

ಆಂದ್ರದಲ್ಲಿ ಸದ್ದು ಮಾಡುತ್ತಿರುವ ಪ್ರತಿಷ್ಠಿತ ಕುಟುಂಬಗಳ ಹೆಣ್ಣು ಮಕ್ಕ

ಆ ಶಕ್ತಿಯ ಮೇಲೆ ಮುಂದಿನ ಚುನಾವಣೆಯಲ್ಲಿ ಹೋರಾಟ ಮಾಡಲಾಗುತ್ತದೆ. ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.

ಗೋವಿಂದರಾಜು, ರಾಮೇಗೌಡರು ಅವರನ್ನು ಚಾಮರಾಜಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷಕ್ಕೆ ಬರಮಾಡಿಕೊಂಡಿದ್ದೇವೆ. ಕುಮಾರಸ್ವಾಮಿ ಪಂಚರತ್ನ ಕಾರ್ಯಕ್ರಮ ಸೇರಿದಂತೆ ಬೇರೆಬೇರೆ ಕಾರ್ಯಕ್ರಮ ರೂಪಿಸಿದ್ದಾರೆ. ಅನೇಕ ಜಿಲ್ಲೆಗಳಿಗೆ ಕುಮಾರಸ್ವಾಮಿ ಹೋಗಿದ್ದು, ಪಂಚರತ್ನ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ ಎಂದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಹೆಸರಿನ ಒಳ್ಳೆಯ ಯೋಜನೆ ರೂಪಿಸಿದ್ದಾರೆ. ಇದು ದೇವೆಗೌಡರ ಕನಸು, ಆಶಿರ್ವಾದ, ಅವರ ಮಾರ್ಗದರ್ಶನ. ನಾವು ಹೋರಾಟದ ಮೂಲಕ ಕರ್ನಾಟಕದಲ್ಲಿ ಕ್ರಾಂತಿ ಮಾಡುತ್ತಿದ್ದೇವೆ ಎಂದರು.

2023 ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭವನೀಯ ಪಟ್ಟಿ

ರಾಮೇಗೌಡರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಬಹಳ ದಿನದಿಂದ ಆಸೆ ಇತ್ತು. ಇವತ್ತು ಪಕ್ಷ ಸೇರುತ್ತಿರುವ ಎಲ್ಲರೂ ರಾಜಕೀಯ ಅನುಭವ ಇರುವವರು. ದೇವೆಗೌಡರು, ಕುಮಾರಸ್ವಾಮಿ ಕಷ್ಟ ಕಾಲದಲ್ಲಿದ್ದಾಗ ಎಲ್ಲಾ ಕಾರ್ಯಕರ್ತರು ಕಾಯ್ದಿದ್ದೀರಿ.

ಜಮೀನಿನಲ್ಲಿ ಒಳ್ಳೆ ಬೆಳೆ ಬರಬೇಕಾದರೆ ಒಳ್ಳೆ ಗೊಬ್ಬರ ಹಾಕಬೇಕು. ಆ ಗೊಬ್ಬರ ಹೊರಗಿನಿಂದ ತರಲೇಬೇಕು. ಮನೆಗೆ ಒಳ್ಳೆಯ ಸೊಸೆ ತರಬೇಕಲ್ಲವೇ? ಅದೇ ರೀತಿ. ನಮ್ಮ ಕನಸು 123 ಕ್ಷೇತ್ರ ಗೆಲ್ಲುವುದರೊಂದಿಗೆ ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವುದು ಎಂದರು.

ವಿಧಾನಸೌಧದ ಎದುರು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಬೇಕು. ನಾಡಪ್ರಭು ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೆಗೌಡರನ್ನು ಆಹ್ವಾನಿಸದಿರುವುದು ನಮಗೆ ನೋವಾಗಿದೆ.
ಅಲ್ಲೆಲ್ಲೋ ಮೂಲೆಯಲ್ಲಿ ಪ್ರತಿಮೆ ಮಾಡಿದ್ದಾರೆ. ನಮ್ಮ ಸರ್ಕಾರ ಬಂದರೆ ವಿಧಾನಸೌಧದ ಎದುರು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ, ದೇವೆಗೌಡರಿಂದ ಉದ್ಘಾಟನೆ ಮಾಡಿಸುತ್ತೇವೆ ಎಂದು ಹೇಳಿದರು.

ಹಿರಿಯ ನಾಯಕರ ಕಡೆಗಣನೆಗೆ ಗುಜರಾತ್ ಸೋಲಿಗೆ ಕಾರಣ : ಮೊಯ್ಲಿ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಚಾಮರಾಜಪೇಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ರಾಜು, ಮಾಜಿ ಉಪ ಮೇಯರ್ ಶ್ರೀರಾಮೇಗೌಡ, ಪಾಲಿಕೆಯ ಮಾಜಿ ಸದಸ್ಯರಾದ ಗೌರಮ್ಮ, ಕಾಂಗ್ರೆಸ್ ಪಕ್ಷದ ನಾಯಕರಾದ ಶೇಖರ್, ದೊರೆ ಸೇರಿದಂತೆ ಅನೇಕ ಮುಖಂಡರು ಜೆಡಿಎಸ್ ಸೇರ್ಪಡೆಯಾದರು. ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Congress, leaders, join JDS, HD Deve Gowda,

Articles You Might Like

Share This Article