ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಕಾಂಗ್ರೆಸ್ ನಾಯಕರು

Social Share

ಶ್ರೀನಗರ,ಜ.30- ಕಾಶ್ಮೀರದಲ್ಲಿ ನಡೆದ ಭಾರತ ಜೋಡೋ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ತೆರಳಿದ್ದ ಕಾಂಗ್ರೆಸ್ ನಾಯಕರು ಹಿಮಸೌಂದರ್ಯಕ್ಕೆ ಮಾರು ಹೋಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಅನೇಕ ಪ್ರಮುಖ ನಾಯಕರು ಕಣಿವೆ ರಾಜ್ಯದಲ್ಲಿ ಸುರಿಯುತ್ತಿರುವ ಹಿಮಮಳೆಯ ನಡುವೆ ಛತ್ರಿ ಹಿಡಿದು ಸೌಂದರ್ಯವನ್ನು ವರ್ಣನೆ ಮಾಡಿದ್ದಾರೆ. ಕಾಶ್ಮೀರದ ಹಿಮಪಾತ ಹಾಗೂ ಪ್ರಕೃತಿ ಸೌಂದರ್ಯಕ್ಕೆ ಮನಸೋತಿರುವ ಡಿ.ಕೆ. ಶಿವಕುಮಾರ್ ವಿಡಿಯೋ ಮೂಲಕ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಭಾರತ ಜೋಡೋ ಯಾತ್ರೆ ಅಂತಿಮ ದಿನ ನಾವೆಲ್ಲ ಕಾಶ್ಮೀರದ ಶ್ರಿನಗರಕ್ಕೆ ಆಗಮಿಸಿದ್ದೇವೆ. ದೇಶವನ್ನು ಒಗ್ಗೂಡಿಸಿ, ದೇಶದ ಐಕ್ಯತೆಗೆ ರಾಹುಲ್ ಗಾಂಧಿ ಅವರು ಈ ಯಾತ್ರೆ ಆರಂಭಿಸಿದ್ದು, ಇಂದು ಯಾತ್ರೆಯ ಅಂತಿಮ ದಿನವಾಗಿದೆ. ಈ ಸಮಾರೋಪ ಕಾರ್ಯಕ್ರಮಕ್ಕೆ ಸುಮಾರು 100 ಸಂಸದರು, ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರು, ಪ್ರಮುಖ ನಾಯಕರು ಸೇರಿದಂತೆ ಸಾವಿರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಕನ್ನಡ ಹಾಡು ಹಾಡದ ಕೈಲಾಷ್ ಖೇರ್ ಮೇಲೆ ಬಾಟಲಿ ದಾಳಿ

ಯಾತ್ರೆಯ ರುವಾರಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ನಿನ್ನೆ ರಾತ್ರಿ ಊಟ ಮುಗಿಸಿ ನಮ್ಮ ಕೊಣೆಗೆ ಬಂದು ಮಲಗುವಷ್ಟರಲ್ಲಿ ರಾತ್ರಿ 1 ಗಂಟೆ ಆಗಿತ್ತು. ರಾತ್ರಿ ಇಲ್ಲಿನ ಹವಾಮಾನ 9 ಡಿಗ್ರಿ ಸೆಲ್ಸಿಯಸ್ ಇತ್ತು. ಬೆಳಗಿನ ಜಾವ 2 ಗಂಟೆ ನಂತರ ಹಿಮ ಸುರಿಯಲು ಆರಂಭವಾಗಿದೆ. ಇಡೀ ಪ್ರದೇಶ ಹಿಮದಿಂದ ತುಂಬಿದೆ. ಇಂದು ಬೆಳಗ್ಗೆ ಕೊಠಡಿಯ ಹೊರಗೆ ಬಂದು ನೋಡಿದಾಗ ನನ್ನ ಜೀವನದಲ್ಲಿ ಎಂದೂ ನೋಡಿರದ ಹಿಮಪಾತ ಹಾಗೂ ಅದರ ಸೌಂದರ್ಯ ಮನಸೂರೆಗೊಂಡಿದೆ ಎಂದು ಹೇಳಿದ್ದಾರೆ.

ಧಾರಾಕಾರ ಮಳೆಯಂತೆ ಹಿಮ ಸುರಿಯುತ್ತಿದೆ. ಹಿಂದೆಂದೂ ನಾನು ಈ ರೀತಿಯ ಅದ್ಭುತ ದೃಶ್ಯ ಕಂಡಿರಲಿಲ್ಲ. ನಾನು ಈ ಹಿಂದೆ ಸ್ವಿಜರ್ಲೆಂಡ್ ಮತ್ತಿತರ ದೇಶಗಳಿಗೆ ಭೇಟಿ ನೀಡಿದ್ದೇನೆ. ಆದರೆ ಇಂದು ನನಗೆ ಆಗಿರುವ ಪ್ರಕೃತಿ ಸೌಂದರ್ಯದ ಅನುಭವ ಹಿಂದೆಂದೂ ಆಗಿರಲಿಲ್ಲ. ಇದನ್ನು ಎಂದು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಬ್ರಿಟನ್ ಮಾಜಿ ಪ್ರಧಾನಿಗೆ ಜೀವ ಬೆದರಿಕೆ ಹಾಕಿದ್ದರಾ ಪುಟಿನ್‍..?

ಈ ಕಾಶ್ಮೀರ ದೇಶದ ಆಸ್ತಿ ನಾವು ಇದನ್ನು ಕಾಪಾಡಿಕೊಳ್ಳಬೇಕು. ಈ ಹವಾಮಾನ ಪರಿಸ್ಥಿತಿಯಲ್ಲಿ ನಮ್ಮ ಯೋಧರು ಹೇಗೆ ಗಡಿ ಕಾಯುತ್ತಾರೆ ಎಂದು ಅಚ್ಚರಿ ವ್ಯಕ್ತಪಡಿಸಿ, ಸೈನಿಕರಿಗೆ ಧನ್ಯವಾದ ಹೇಳಿರುವ ಡಿ.ಕೆ.ಶಿವಕುಮಾರ್, ಪ್ರಕೃತಿ ವೈಭವಕ್ಕೆ ನಾವು ಮನಸೋಲಬೇಕಿದೆ ಎಂದು ತಿಳಿಸಿದ್ದಾರೆ.

Congress, leaders, Kashmir, snow, BharatJodoYatra, Shivakumar

Articles You Might Like

Share This Article