ರಾಮಮಂದಿರ ನವದೆಹಲಿ,ಡಿ.22- ಮುಂಬರುವ ಜನವರಿ 22 ರಂದು ಅಯೋಧ್ಯೆಯಲ್ಲಿ ನೆರವೇರಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಉನ್ನತ ನಾಯಕರು ಪಾಲ್ಗೊಳ್ಳುತ್ತಾರೆಯೇ ಎಂಬುದರ ಕುರಿತು ಕಾಂಗ್ರೆಸ್ ತನ್ನ ನಿಲುವನ್ನು ಇನ್ನು ಬಹಿರಂಗಪಡಿಸಿಲ್ಲ, ಆದರೆ ಆಹ್ವಾನಗಳಿಗೆ ಧನ್ಯವಾದ ಎಂದು ಹೇಳಿದೆ.
ಜ. 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಪಕ್ಷದ ನಾಯಕ ಅೀಧಿರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಬಂದಿದೆ.ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಹ್ವಾನ ನೀಡಿತ್ತು.
ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ ಎನ್‍ಐಎಗೆ ವರ್ಗಾವಣೆ
ಪಕ್ಷದ ಮುಖಂಡರು ಸಮಾರಂಭಕ್ಕೆ ಬರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಪಕ್ಷದ ನಿಲುವು ನಿಮಗೆ ತಿಳಿಯುತ್ತದೆ, ಭಾಗವಹಿಸುವ ಬಗ್ಗೆ ಜನವರಿ 22 ರಂದು ತಿಳಿಯಲಿದೆ ಎಂದು ಮಾರ್ಮಿಕವಾಗಿ ತಿಳಿಸಿದ್ದಾರೆ. ಅವರು ನಮ್ಮನ್ನು ಆಹ್ವಾನಿಸಿದ್ದಾರೆ, ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ನಾವು ಅವರಿಗೆ ತುಂಬಾ ಕೃತಜ್ಞರಾಗಿರುತ್ತೇವೆ ಎಂದು ಅವರು ಹೇಳಿದರು.
ಆಮಂತ್ರಣಗಳನ್ನು ಖರ್ಗೆ, ಸೋನಿಯಾ ಗಾಂಧಿ, ಆೀಧಿರ್ ರಂಜನ್ ಚೌಧರಿ ಅವರಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್ ಡಿ ದೇವೇಗೌಡರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇತರೆ ಪ್ರತಿಪಕ್ಷ ನಾಯಕರಿಗೂ ಹೆಚ್ಚಿನ ಆಹ್ವಾನ ಕಳುಹಿಸುವ ಸಾಧ್ಯತೆ ಇದೆ. ದೇಶದ ಗೌರವಕ್ಕೆ ಕೊಡುಗೆ ನೀಡುವ ಎಲ್ಲಾ ಪ್ರಮುಖ ವ್ಯಕ್ತಿಗಳ ಜೊತೆಗೆ ವಿವಿಧ ಸಂಪ್ರದಾಯಗಳ ಪೂಜ್ಯ ದಾರ್ಶನಿಕರಿಗೆ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಟ್ರಸ್ಟ ಹೇಳಿದೆ.