ಪ್ರತಿಪಕ್ಷದವರ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಆಗ್ರಹಿಸಿ ಕಾಂಗ್ರೆಸ್ ರಾಜಭವನ ಚಲೋ

ಬೆಂಗಳೂರು, ಆ.31- ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಜಿ.ಜನಾರ್ಧ ನರೆಡ್ಡಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರನ್ನು ಆಗ್ರಹಿಸಿ ಕಾಂಗ್ರೆಸ್ ಇಂದು ರಾಜಭವನ ಚಲೋ ಪ್ರತಿಭಟನೆ ನಡೆಸಿತು. ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಇರುವ ಮಹಾತಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಬಳಿಕ ಅಲ್ಲಿಂದ ರಾಜಭವನದವರೆಗೂ ಪಾದಯಾತ್ರೆ ನಡೆಸಿದರು. ಆನಂತರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಈ ಸಂಬಂಧ ಮನವಿಪತ್ರವನ್ನು ಸಲ್ಲಿಸಲಾಯಿತು. ಮಹಾತಗಾಂಧೀಜಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಸಚಿವರಾದ ಡಾ.ಜಿ.ಪರಮೇಶ್ವರ, ಹೆಚ್.ಕೆ.ಪಾಟೀಲ್, ಕೃಷ್ಣಭೈರೇಗೌಡ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್ ಖಾನ್,ಈಶ್ವರ್ ಖಂಡ್ರೆ, ಬೈರತಿ ಸುರೇಶ್, ಡಿ.ಸುಧಾಕರ್, ಡಾ. ಎಂ.ಸಿ.ಸುಧಾಕರ್, ಎಸ್.ಎಸ್.ಮಲ್ಲಿಕಾರ್ಜುನ್, ಡಾ.ಶರಣ ಪ್ರಕಾಶ್ ಪಾಟೀಲ್ ಸೇರಿಂದತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು , ಮಾಜಿ ಸಂಸದರು, ಮಾಜಿ ಶಾಸಕರು ಕೆಲಕಾಲ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ … Continue reading ಪ್ರತಿಪಕ್ಷದವರ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಆಗ್ರಹಿಸಿ ಕಾಂಗ್ರೆಸ್ ರಾಜಭವನ ಚಲೋ