‘ಎಸ್‍ಬಿಎಂ’ ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಪರಮೇಶ್ವರ್’ಗೆ ಮನವಿ

SBM--01

ಬೆಂಗಳೂರು, ಜೂ.4- ಎಸ್‍ಬಿಎಂ ಎಂದು ಪ್ರಚಲಿತದಲ್ಲಿರುವ ಮೂವರು ಶಾಸಕರ ಪೈಕಿ ಯಾರಿಗಾದರು ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ಬೇಡಿಕೆ ಇಡಲಾಗಿದೆ.  ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಬೆಂಗಳೂರಿನ ಶಾಸಕರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ಮತ್ತು ಮುನಿರತ್ನ ಅವರು ಮೂವರಲ್ಲಿ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡಲೇ ಬೇಕೆಂದು ಒತ್ತಾಯಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನಾವು ಮೂರು ಮಂದಿ ಪಕ್ಷಕ್ಕಾಗಿ ದುಡಿದಿದ್ದೇವೆ. ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಮೂವರೂ ಸಚಿವ ಸ್ಥಾನದ ಆಕಾಂಕ್ಷಿಗಳು. ನಮ್ಮ ಪೈಕಿ ಯಾರಿಗಾದರು ಒಬ್ಬರಿಗೆ ಸಚಿವ ಸ್ಥಾನ ನೀಡಿ ಎಂದು ಮನವಿ ಮಾಡಿದ್ದೇವೆ. ಪರಮೇಶ್ವರ್ ಅವರು ಹೈಕಮಾಂಡ್ ಗಮನಕ್ಕೆ ತಂದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು. ಶಾಸಕರಾದ ಸೋಮಶೇಖರ್ ಮತ್ತು ಮುನಿರತ್ನ ಈ ಸಂದರ್ಭದಲ್ಲಿ ಹಾಜರಿದ್ದರು.

Sri Raghav

Admin