Home ಇದೀಗ ಬಂದ ಸುದ್ದಿ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಹತ್ಯೆ

ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಹತ್ಯೆ

0
ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಹತ್ಯೆ

ಬೆಳಗಾವಿ, ಏ.4- ಅಣ್ಣಪ್ಪ ಖೀಳೆಗಾಂವ್ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷ ಹಾಗು ಶಾಸಕ ಲಕ್ಷ್ಮಣ ಸವದಿ ಅವರ ಆಪ್ತರಾಗಿದ್ದ ಅಣ್ಣಪ್ಪ ಬಸಪ್ಪ ನಿಂಬಾಳ ಮೇಲೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಸುಮಾರು ಆರರಿಂದ ಏಳು ಜನರ ದುಷ್ಟರ ಗುಂಪು ಅಣ್ಣಪ್ಪ ಬಸಪ್ಪ ನಿಂಬಾಳ ಮೇಲೆ ಎರಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ದಾವಿಸಿದ ಅಥಣಿ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಆಸ್ಪತ್ರೆಗೆ ಸಾಗಿಸಿದಾರೆ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಹಂತಕರ ಪತ್ತೆಗೆ ಕಾರ್ಯಾಚರಣೆ ಆರಂಭವಾಗಿದೆ ಎಂದು ಹೇಳಿದರು.