ಹೃದಯಘಾತದಿಂದ ಸಂಸದ ಸಾವು, ಭಾರತ್ ಜೋಡೋ ಯಾತ್ರೆ ಸ್ಥಗಿತ

Social Share

ಲೂಯಾನ,ಜ.14-ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕಾಂಗ್ರೆಸ ಸಂಸದರೊಬ್ಬರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.

76 ವರ್ಷ ವಯಸ್ಸಿನ ಜಲಂಧರ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರು ಹೃದಯಘಾತದಿಂದ ನಿಧನರಾದವರು.ಪಂಜಾಬ್‍ನ ಫಿಲ್ಲೌರ್ ನಲ್ಲಿ ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅವರು ಇದ್ದಕ್ಕಿದ್ದ ಹಾಗೆ ಕುಸಿದುಬಿದ್ದರು. ತಕ್ಷಣ ಅವರನ್ನು ಫಗ್ವಾರಾದಲ್ಲಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮದ್ಯ ಖರೀದಿ ವಯೋಮಿತಿ 21ರಿಂದ 18ಕ್ಕಿಳಿಸಲು ಮುಂದಾದ ಸರ್ಕಾರ

ಸಂಸದರು ಕುಸಿದು ಬೀಳುತ್ತಿದ್ದಂತೆ ರಾಹುಲ್ ಗಾಂಧಿ ಅವರು ಯಾತ್ರೆ ಸ್ಥಗಿತಗೊಳಿಸಿ ಆಸ್ಪತ್ರೆಗೆ ದೌಡಾಯಿಸಿದರು. ಚೌಧರಿ ನಿಧನರಾಗುತ್ತಿದ್ದಂತೆ ಯಾತ್ರೆ ಮುಂದುವರೆಸುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ.

ಲೋಕಸಭೇ ಸ್ಪೀಕರ್ ಓಂ ಬಿರ್ಲಾ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತಿತರರು ಅಗಲಿದ ನಾಯಕನಿಗೆ ಸಂತಾಪ ಸೂಚಿಸಿದ್ದಾರೆ.

#CongressMP, #Dies, #HeartAttack, #BharatJodoYatra, #SantokhSinghChaudhary,

Articles You Might Like

Share This Article