ನವದೆಹಲಿ, ಡಿ 12 (ಪಿಟಿಐ) ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಉಜ್ಜಯಿನಿ ಮಾಸ್ಟರ್ ಪ್ಲಾನ್ ನಲ್ಲಿ ದೊಡ್ಡ ಪ್ರಮಾಣದ ಕುಶಲತೆ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಬಿಜೆಪಿ ಸಿಎಂ ಆಗಿ ಆಯ್ಕೆ ಮಾಡಿದೆ ಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ.
ಎಕ್ಸ್‍ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಚುನಾವಣೆ ಫಲಿತಾಂಶದ ಎಂಟು ದಿನಗಳ ನಂತರ, ಬಿಜೆಪಿ ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದೆ, ಅವರ ವಿರುದ್ಧ ಉಜ್ಜಯಿನಿಯಲ್ಲಿ ದೊಡ್ಡ ಪ್ರಮಾಣದ ಕುಶಲತೆ ಸೇರಿದಂತೆ ಹಲವು ಗಂಭೀರ ಆರೋಪಗಳಿವೆ ಎಂದು ಆರೋಪಿಸಿದ್ದಾರೆ.
ಅಯೋಧ್ಯೆಯಲ್ಲಿ ಗಗನಕ್ಕೇರಿದ ಭೂಮಿ ಬೆಲೆ
ಯಾದವ್ ಅವರ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ನಿಂದನೆ, ಬೆದರಿಕೆ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಇದೇಣಾ ಮಧ್ಯಪ್ರದೇಶಕ್ಕೆ ಮೋದಿ ಗ್ಯಾರಂಟಿ ಎಂದು ಅವರು ಪ್ರಶ್ನಿಸಿದರು. ಮುಖ್ಯಮಂತ್ರಿ ಹುದ್ದೆಯ ಸ್ರ್ಪಗಳ ನಡುವೆ ಕಾಣದ ಯಾದವ್, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‍ಎಸ್‍ಎಸ್) ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಮೂರು ಬಾರಿ ಶಾಸಕರಾಗಿದ್ದಾರೆ ಮತ್ತು ಒಬಿಸಿಗಳ ಪ್ರಮುಖ ನಾಯಕರಾಗಿದ್ದಾರೆ.