ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Social Share

ಬೆಂಗಳೂರು, ಜು.27- ಜಾರಿ ನಿರ್ದೇಶನಾಲಯ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಎರಡನೇ ದಿನವೂ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

ನಿನ್ನೆ ಬೆಂಗಳೂರಿನಲ್ಲಿ ಮಾತ್ರ ಪ್ರತಿಭಟನೆ ನಡೆಸಲಾಗಿತ್ತು. ವಿಚಾರಣೆ ಇಂದೂ ಕೂಡ ಮುಂದುವರೆದಿರುವುದರಿಂದ ನಗರದ ಆನಂದ್‍ರಾವ್ ವೃತ್ತದ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಮೌನ ಸತ್ಯಾಗ್ರಹ ನಡೆಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಶಾಸಕರಾದ ಎನ್.ಎ.ಹ್ಯಾರಿಸ್, ಮುಖಂಡರಾದ ಪುಷ್ಪಾ ಅಮರನಾಥ್, ಅಂಜನ್‍ಮೂರ್ತಿ, ಹುಚ್ಚಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿಚಾರಣೆ ನೆಪದಲ್ಲಿ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು. ಸೋನಿಯಾಗಾಂಧಿ ಅವರ ವಿಚಾರಣೆ ಪೂರ್ಣಗೊಳ್ಳುವವರೆಗೂ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಕಾಂಗ್ರೆಸಿಗರು ಘೋಷಿಸಿದ್ದಾರೆ.

Articles You Might Like

Share This Article