Wednesday, March 26, 2025
Homeರಾಜ್ಯಡಿಕೆಶಿ ಹೇಳಿಕೆ ತಿರುಚಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಡಿಕೆಶಿ ಹೇಳಿಕೆ ತಿರುಚಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Congress protests against BJP,

ಬೆಂಗಳೂರು, ಮಾ.25- ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಹಾಗೂ ಕಿರಣ್ ರಿಜಿಜು ಸಂಸತ್‌ ನಲ್ಲಿ ಸಂವಿಧಾನ ಬದಲಾವಣೆಗೆ ಡಿ.ಕೆ.ಶಿವಕುಮಾ‌ರ್ ಅವರು ಒತ್ತಾಯಿಸಿದ್ದಾರೆ ಎಂಬುವ ಸುಳ್ಳು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹ‌ರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಮೂಲಕ ನಮ್ಮ ಹಕ್ಕನ್ನು ಪಡೆಯಬೇಕೆಂದು ಸಂವಿಧಾನದ ರಕ್ಷಣೆಗೆ ಇಡೀ ರಾಜ್ಯ ವ್ಯಾಪ್ತಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಬಿಜೆಪಿಗರು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುವ ಹಿನ್ನೆಲೆಯಲ್ಲಿ ಸಂವಿಧಾನವನ್ನು ಡಿ.ಕೆ.ಶಿವಕುಮಾರ್ ಅವರು ಬದಲಾಯಿಸುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಮೂಲಕ ಸಂವಿಧಾನಕ್ಕೆ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಇವರ ವಿರುದ್ದ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ದಿನನಿತ್ಯ ಸ್ಮರಿಸುವ ಕಾಂಗ್ರೆಸ್ಸಿಗರು ಎಂದಿಗೂ ಸಹ ಸಂವಿಧಾನವನ್ನು ವಿರೋಧಿಸುವ ಮಾತನ್ನಾಡುವುದಿಲ್ಲ, ಆದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹೆಸರನ್ನು ಹೇಳುವುದು ಒಂದು ವಾಡಿಕೆಯಾಗಿದೆ.

ಗೃಹ ಸಚಿವ ಅಮಿತ್ ಷಾ ಅವರು ನೀಡಿರುವ ಹೇಳಿಕೆಯನ್ನು ಮರೆಮಾಚಲು ಇಂತಹ ಸುಳ್ಳು ಹೇಳಿಕೆಗಳನ್ನು ಬಿಜೆಪಿ ನಾಯಕರು ನೀಡುತ್ತಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ಮುಖಂಡರಾದ ಎ.ಆನಂದ್, ಪ್ರಕಾಶ್, ಹೇಮರಾಜು, ಚಂದ್ರಶೇಖರ್, ಕೆ.ಟಿ.ನವೀನ್, ಉಮೇಶ್, ಸುಂಕದಕಟ್ಟೆ ನವೀನ್, ಕುಶಾಲ್ ಹರುವೇಗೌಡ, ಆನಂದ, ಓಬಳೇಶ್, ನವೀನ್ ಸಾಯಿ, ಚಿನ್ನಿ ಪ್ರಕಾಶ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

Latest News