ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Social Share

ರಾಮನಗರ,ಮಾ.14- ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ದಶಪಥ ಎಕ್ಸ್‍ಪ್ರೆಸ್‍ವೇನಲ್ಲಿ ಸರ್ವೀಸ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಮೂಲಭೂತ ವ್ಯವಸ್ಥೆ, ಸರ್ವೀಸ್ ರಸ್ತೆ ಸರಿಪಡಿಸಿದ ಹೆಚ್ಚಿನ ದರ ನಿಗದಿ ಮಾಡಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು.

ಬೆಳಗ್ಗೆ 8 ಗಂಟೆ ಸುಮಾರಿಗೆ ಟೋಲ್ ಸಂಗ್ರಹ ಪ್ರಾರಂಭವಾಗಿದ್ದು, ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಕಿ ಹಾಗೂ ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಬಳಿ ಇರುವ ಟೋಲ್ ಪ್ಲಾಜಾಗಳ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಆಸ್ಟ್ರೇಲಿಯಾಕ್ಕೆ ಪರಮಾಣುಚಾಲಿತ ಜಲಾಂತರಗಾಮಿ ನೌಕೆ : ಬಿಡೆನ್

ಬೆಂಗಳೂರಿನಿಂದ ನಿಡಘಟ್ಟದವರೆಗಿನ ಸುಮಾರು 55 ಕಿ.ಮೀ. ರಸ್ತೆಗೆ ಮೊದಲ ಹಂತದ ಟೋಲ್ ಸಂಗ್ರಹಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದ್ದು, ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಹಾಗೂ ಮೂಲಭೂತ ಸೌಕರ್ಯ ಒದಗಿಸದೆ ಹೆಚ್ಚಿನ ದರ ನಿಗದಿಪಡಿಸಿರುವುದು, ಸರ್ವೀಸ್ ರಸ್ತೆ ಸಾರ್ವಜನಿಕ ಬಳಕೆಗೆ ಮುಕ್ತವಾಗುವ ಮುನ್ನವೇ ಟೋಲ್ ಸಂಗ್ರಹಕ್ಕಿಳಿದಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು.

ಅಲ್ಲದೆ, ಮೊದಲ ದಿನವೇ ಸಾಕಷ್ಟು ತೊಂದರೆಗಳು ಎದುರಾಗಿದ್ದು, ವಾಹನಗಳಿಗೆ ಅಳವಡಿಸಿದ್ದ ಫಾಸ್ಟ್ ಟ್ಯಾಗ್‍ಗಳು ಸ್ಕ್ಯಾನ್ ಆಗುತ್ತಿರಲಿಲ್ಲ. ಇದರಿಂದಾಗಿ ಕಾರು, ಬಸ್, ಟ್ರಕ್ ಸೇರಿದಂತೆ ಇನ್ನಿತರೆ ವಾಹನ ಚಾಲಕರು ಕಿರಿಕಿರಿ ಅನುಭವಿಸುವಂತಾಯಿತು.

ಬಂದೋಬಸ್ತ್: ಪ್ರತಿಭಟನೆ ಹಿನ್ನೆಲೆಯಲ್ಲಿ ಶೇಷಗಿರಿಹಳ್ಳಿ ಹಾಗೂ ಕಣಮಿಣಕಿ ಟೋಲ್ ಪ್ಲಾಜ ಮುಂಭಾಗ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರತಿಭಟನಾಕಾರರು ಪ್ಲಾಜಾಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಸ್‍ಗಳಲ್ಲಿ ಕರೆದೊಯ್ದರು.

ಬಿಜೆಪಿಗರನ್ನು ಕೆರಳಿಸಿದ ಮೋದಿ ವಿರುದ್ಧದ ರಾಂಧವಾ ಹೇಳಿಕೆ

ಮುನ್ನೆಚರಿಕಾ ಕ್ರಮವಾಗಿ ಪ್ರತಿಭಟನಾಕರರನ್ನು ಬಂಧಿಸಲು ಮೂರು ಡಿಎಆರ್ ವಾಹನಗಳನ್ನು ಸ್ಥಳದಲ್ಲಿ ಪೊಲೀಸರು ಸಿದ್ದ ಮಾಡಿಕೊಂಡಿದ್ದರು. ಪ್ರತಿಭಟನಾಕರಾರನ್ನು ಎರಡು ಕೆಎಸ್‍ಆರ್‍ಟಿಸಿ ಬಸ್ ಗಳಲ್ಲಿ ಪೊಲೀಸರು ವಶಕ್ಕೆ ಪಡೆದರು.

ಕಾರು, ಜೀಪು, ವ್ಯಾನ್‍ಗಳ ಏಕಮುಖ ಸಂಚಾರಕ್ಕೆ 135 ರೂ., ದ್ವಿಮುಖ ಸಂಚಾರಕ್ಕೆ 205 ರೂ., ಸ್ಥಳೀಯ ವಾಹನಗಳಿಗೆ 70ರೂ., ತಿಂಗಳ ಪಾಸ್ 4525ರೂ.ಗೆ ನಿಗದಿ ಮಾಡಲಾಗಿದೆ. ಲಘು ವಾಹನ ಹಾಗೂ ಮಿನಿ ಬಸ್‍ಗಳ ಏಕಮುಖ ಸಂಚಾರಕ್ಕೆ 220, ದ್ವಿಮುಖ ಸಂಚಾರಕ್ಕೆ 330, ಸ್ಥಳೀಯ ವಾಹನಗಳಿಗೆ 110, ತಿಂಗಳ ಪಾಸ್ 7315ರೂ.

ಬಸ್, ಟ್ರಕ್‍ಗಳಿಗೆ ಏಕಮುಖ ಸಂಚಾರಕ್ಕೆ 460, ದ್ವಿಮುಖ ಸಂಚಾರಕ್ಕೆ 690, ಸ್ಥಳೀಯ ವಾಹನಗಳಿಗೆ 230, ತಿಂಗಳ ಪಾಸ್ 15325ರೂ.ಗೆ ನಿಗದಿಪಡಿಸಲಾಗಿದ್ದು, ಇದು ಭಾರೀ ಮೊತ್ತವಾಗಿದ್ದು, ವಾಹನ ಸವಾರರು ಹಾಗೂ ಮಾಲೀಕರು ದುಬಾರಿ ಟೋಲ್‍ನಿಂದ ಸಂಷ್ಟಕ್ಕೆ ಸಿಲುಕುವಂತಾಗಿದೆ.

ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಎಕ್ಸ್‍ಪ್ರೆಸ್‍ವೇನಲ್ಲಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ ದರ ನಿಗದಿ ಮಾಡುವಂತೆ ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.

Congress, protests, Bangalore, Mysore, highway, toll, collection,

Articles You Might Like

Share This Article