ಜಾತ್ಯತೀತ ಶಕ್ತಿಗಳ ಜೊತೆ ಹೊಂದಾಣಿಕೆಗೆ ಕಾಂಗ್ರೆಸ್ ಸಿದ್ಧ : ಖರ್ಗೆ

Social Share

ರಾಯಪುರ, ಫೆ.25- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನವಿರೋಧಿ ಬಿಜೆಪಿ ಸರಕಾರವನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಸಮರ್ಥ ಪರ್ಯಾಯವನ್ನು ರೂಪಿಸಲು ತಮ್ಮ ಪಕ್ಷ ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ.

ಛತ್ತೀಸ್‍ಗಢದ ರಾಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ 85ನೇ ಸರ್ವಸದಸ್ಯರ ಅಧಿವೇಶನದಲ್ಲಿ ಮಾತನಾಡಿದ ಖರ್ಗೆ, ದೇಶವು ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ನಿರಂತರ ದಾಳಿ, ಚೀನಾ ಗಡಿಯಲ್ಲಿ ರಾಷ್ಟ್ರೀಯ ಭದ್ರತೆಯ ಸಮಸ್ಯೆಗಳು, ಸಾರ್ವಕಾಲಿಕ ಅಧಿಕ ಹಣದುಬ್ಬರ ಮತ್ತು ದಾಖಲೆಯ ನಿರುದ್ಯೋಗದಂತಹ ಸವಾಲುಗಳನ್ನು ಎದುರಿಸುತ್ತಿದೆ ಎಂದು ಹೇಳಿದರು.

ಒಂದೇ ಕುಟುಂಬದ ನಾಲ್ವರ ಕಗ್ಗೊಲೆ, ಬೆಚ್ಚಿಬಿದ್ದ ಭಟ್ಕಳ

ಕಠಿಣ ಪರಿಸ್ಥಿತಿಯಲ್ಲಿ, ಸಮರ್ಥ ಮತ್ತು ನಿರ್ಣಾಯಕ ನಾಯಕತ್ವವನ್ನು ನೀಡಬಲ್ಲ ಏಕೈಕ ಪಕ್ಷ ಕಾಂಗ್ರೆಸ್ ಮಾತ್ರ. 2004ರಿಂದ 2014ರವರೆಗೆ ಸಮಾನ ಮನಸ್ಕ ಪಕ್ಷಗಳೊಂದಿಗೆ ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ದೇಶದ ಜನತೆಗೆ ಅಮೂಲ್ಯ ಸೇವೆ ಸಲ್ಲಿಸಿದೆ ಎಂದು ಖರ್ಗೆ ಹೇಳಿದರು.

ಜನವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರವನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡುವ ಮೂಲಕ ನಾವು ಮತ್ತೊಮ್ಮೆ ಸಮರ್ಥ ಪರ್ಯಾಯವನ್ನು ರೂಪಿಸಲು ಎದುರು ನೋಡುತ್ತಿದ್ದೇವೆ ಎಂದು ಪುನರುಚ್ಚರಿಸಿದರು.

ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ, ದೆಹಲಿಯಲ್ಲಿ ಕುಳಿತಿರುವವರ ಡಿಎನ್‍ಎ ಬಡವರ ವಿರೋಧಿಯಾಗಿದೆ. ಪ್ರಜಾಪ್ರಭುತ್ವವನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ಇವುಗಳ ವಿರುದ್ಧ ಕಾಂಗ್ರೆಸ್ ಜನಾಂದೋಲನ ರೂಪಿಸಬೇಕಿದೆ ಎಂದರು.

ಬಿಜೆಪಿ ಸರ್ಕಾರಕ್ಕೆ ಇನ್ನೆಷ್ಟು ಶಿಕ್ಷಕರ ಹೆಣ ಬೇಕು..? ” ಸಿದ್ದರಾಮಯ್ಯ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ತಮ್ಮನ್ನು ಪ್ರಧಾನ ಸೇವಕ ಎಂದು ಕರೆದುಕೊಳ್ಳುವವರು ತಮ್ಮ ಸ್ನೇಹಿತರ ಹಿತಾಸಕ್ತಿಗಳನ್ನು ಕಾಪಾಡುತ್ತಿದ್ದಾರೆ. ನೋಟು ಅಮಾನ್ಯೀಕರಣ, ಜಿಎಸ್‍ಟಿ ಜಾರಿ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲಿನ ನಿರಂತರ ದಾಳಿಯಂತಹ ಕ್ರಮಗಳಿಂದಾಗಿ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಷಡ್ಯಂತ್ರವಿದೆ, ಆದರೆ ಕಾಂಗ್ರೆಸ್ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡಬೇಕಿದೆ ಎಂದರು.

Articles You Might Like

Share This Article