Friday, May 24, 2024
Homeರಾಷ್ಟ್ರೀಯಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್ ಅಭ್ಯರ್ಥಿ

ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್ ಅಭ್ಯರ್ಥಿ

ಅಹಮದಾಬಾದ್, ಮಾ 19- ಗುಜರಾತ್‍ನ ಅಹಮದಾಬಾದ್ ಪೂರ್ವ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೋಹನ್ ಗುಪ್ತಾ ಅವರು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ. ಗುಪ್ತಾ ಅವರು ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರರಾಗಿದ್ದು, ಮಾರ್ಚ್ 12 ರಂದು ಪಕ್ಷವು ಘೋಷಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರಿತ್ತುಆದರೆ ಕೌಟುಂಬಿಕ ಕಾರಣ ನಾನು ಹಿಂದೆ ಸರಿಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನನ್ನ ತಂದೆಯ ಸ್ಥಿತಿ ಗಂಭೀರವಾದ ಕಾರಣ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗಾಗಿ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಹಮದಾಬಾದ್ ಪೂರ್ವ ಕ್ಷೇತ್ರದಿಂದ ಸ್ರ್ಪಧಿಸುವುದಿಲ್ಲ ಹೊಸ ಅಭ್ಯರ್ಥಿಗೆ ನಾನು ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅವರು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹ್ ಗೋಹಿಲ್ ಅವರಿಗೆ ತಮ್ಮ ಕೈಬರಹದ ಪತ್ರ ಮೂಲಕ ತಿಳಿಸಿರುವುದಾಗಿ ಪೋಸ್ಟ್ ಮಾಡಿದ್ದಾರೆ, ಪ್ರಸ್ತು ಗುಜರಾತ್‍ನ ಎಲ್ಲಾ 26 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.ಕಾಂಗ್ರೆಸ್ ಇನ್ನೂ 19 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ.ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಇದುವರೆಗೆ 22 ಅಭ್ಯರ್ಥಿಗಳನ್ನು ಘೋಷಿಸಿದೆ.

RELATED ARTICLES

Latest News