ಸೋಮವಾರ ಕಾಂಗ್ರೆಸ್ ಕಾರ್ಯಪಡೆಯೊಂದಿಗೆ ಖರ್ಗೆ ಮೊದಲ ಸಭೆ

Social Share

ನವದೆಹಲಿ,ನ.12- ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಪಡೆ ಸಭೆ ನಡೆಸಲಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆ ಸದಸ್ಯರೊಂದಿಗೆ ಸೋಮವಾರ ಖರ್ಗೆ ಅವರು ಸಭೆ ನಡೆಸಲು ತೀರ್ಮಾನಿಸಿದ್ದಾರೆ.

ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕಾರ್ಯಪಡೆಯ ಮೊದಲ ಸಭೆ ಇದಾಗಿದೆ. ಕಾರ್ಯಪಡೆಯ ಸದಸ್ಯರು 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ರೂಪಿಸಲಾಗಿರುವ ಕಾರ್ಯತಂತ್ರಗಳ ಬಗ್ಗೆ ಖರ್ಗೆ ಅವರಿಗೆ ವಿವರಿಸಲಿದ್ದಾರೆ.

ನಡುರಸ್ತೆಯಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಪೋಟ : 12 ಮಂದಿ ಸಾವು

ಕಾರ್ಯಪಡೆಯ ಸದಸ್ಯರಲ್ಲಿ ಪಿ ಚಿದಂಬರಂ, ಮುಕುಲ್ ವಾಸ್ನಿಕ್, ಜೈರಾಮ್ ರಮೇಶ್, ಕೆಸಿ ವೇಣುಗೋಪಾಲ, ಅಜಯ್ ಮಾಕನ್, ರಣದೀಪ್ ಸುರ್ಜೆವಾಲಾ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತಿತರ ಹಿರಿಯ ಕಾಂಗ್ರೆಸ್ ಮುಖಂಡರಿದ್ದಾರೆ.

ಬೆಂಗಳೂರಲ್ಲಿ ಜಿಟಿಜಿಟಿ ಮಳೆ, ಶೀತಗಾಳಿ

ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸು ಕುಗ್ಗಿ ಹೋಗಿರುವ ಹಿನ್ನಲೆಯಲ್ಲಿ ಎಂಟು ಸದಸ್ಯರ ಸಮಿತಿಯು ಪಕ್ಷದ ಬಲವರ್ಧನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೋನಿಯಾ ಗಾಂಧಿ ಅವರಿಗೆ ವರದಿ ನೀಡಿತ್ತು. ಆ ವರದಿ ಆಧಾರದ ಮೇಲೆ ಸೋನಿಯಾ ಅವರು 2024 ಚುನಾವಣೆಯ ಕಾರ್ಯಪಡೆ ರಚಿಸಿದ್ದರು.

Articles You Might Like

Share This Article