ರಾಜ್ಯದಲ್ಲಿ 150 ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ : ಎಂ.ಬಿ.ಪಾಟೀಲ್ ಭವಿಷ್ಯ

Spread the love

ಚಿಕ್ಕಮಗಳೂರು, ಮೇ 20- 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ತಿಳಿಸಿದರು.

ಸುದ್ದಿಗೋಷ್ಠಿಯವ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ 70 ವರ್ಷದಲ್ಲಿ ಮಾಡಿದ ಸಾಧನೆ ಹೇಳಲು70 ದಿನಗಳು ಸಾಕಾಗುವುದಿಲ್ಲ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2014 ರಿಂದ ದೇಶದ ಜನರಿಗೆ ದೊಡ್ಡ ಬದಲಾವಣೆ ತರುವ ಕನಸನ್ನು ಬಿತ್ತಿದರು. ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದರು. 5 ವರ್ಷದಲ್ಲಿ 2 ಕೋಟಿ ಉದ್ಯೋಗ ಸೃಷ್ಠಿಸುತ್ತೇವೆ ಎಂದರು.

ಸಣ್ಣ ಕೈಗಾರಿಕೆಗಳು ಮುಚ್ಚುವ ಸ್ಥಿತಿ ಬಂದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಕಬ್ಬಿಣ, ಸಿಮೆಂಟು, ಅಡುಗೆ ಎಣ್ಣೆ ಎಲ್ಲದರ ಬೆಲೆ ಹೆಚ್ಚಾಗಿದೆ ಯಾರಿಗೂ ಅಚ್ಛೇದಿನ್ ಬರಲಿಲ್ಲ ಎಂದು ದೂರಿದರು. ಕೆಲವೊಂದು ಧರ್ಮವನ್ನು ಗುರಿ ಮಾಡಿ ಅನ್ಯಾಯ ಮಾಡುತ್ತಿದ್ದಾರೆ. ಕುವೆಂಪು ಹೇಳಿದ ಸರ್ವಜನಾಂಗದ ಶಾಂತಿಯ ತೋಟ ಇಂದು ಉಳಿದಿಲ್ಲ. ಎಲ್ಲವನ್ನು ಹಾಳುಗೆಡವಲಾಗಿದೆ. ಮತ್ತೆ ಅದು ಶಾಂತಿಯ ತೋಟವಾಗಬೇಕಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರು.

2013 ರಿಂದ 2018 ವರೆಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 169 ಭರವಸೆಗಳಲ್ಲಿ 165ನ್ನು ಈಡೇರಿಸಿದೆವು. ಆದರೆ ನರೇಂದ್ರ ಮೋದಿ ಅವರು ನೀಡಿದ ಯಾವುದೇ ಭರವಸೆ ಈಡೇರಿಲ್ಲ ಎಂದರು. ಎಸ್‍ಡಿಪಿಐ, ಪಿಎಫ್‍ಐ ಸಹ ಒಂದು ಕೋಮು ಸಂಘಟನೆ, ಇದರೊಂದಿಗೆ ಇಂತಹ ಕೆಲಸ ಮಾಡುವ ಹಿಂದೂ ಸಂಘಟನೆಗಳನ್ನೂ ನಿಷೇಧಿಸಬೇಕು ಎಂದು ಒತ್ತಯಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, ವಿಧಾನಪರಿಷತ್ ಮಾಜಿ ಸದಸ್ಯೆ, ಗಾಯತ್ರಿ ಶಾಂತೇಗೌಡ, ರೇಖಾ ಹುಲಿಯಪ್ಪಗೌಡ, ಮಂಜೇಗೌಡ, ಎಚ್.ಎಚ್.ದೇವರಾಜ್, ಹಿರೇಮಗಳೂರು ಪುಟ್ಟಸ್ವಾಮಿಎಂ.ಸಿ.ಶಿವಾನಂದಸ್ವಾಮಿ ಇತರರು ಇದ್ದರು.

Facebook Comments