ಪ್ರಜ್ವಲ್‌ ರೇವಣ್ಣ ವಿರುದ್ಧ ಕಾಂಗ್ರೆಸ್‌ನ ನಾಯಕಿಯರ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ

ಬೆಂಗಳೂರು,ಏ.28- ಹಾಸನದ ಸಂಸದರು ಭಾಗಿಯಾಗಿದ್ದಾರೆಂದು ಹೇಳಲಾದ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕಾಂಗ್ರೆಸ್‌ನ ನಾಯಕಿಯರು ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಯ್ಡು, ಕವಿತಾ ರೆಡ್ಡಿ, ಭವ್ಯಾ ನರಸಿಂಹಮೂರ್ತಿ ಸೇರಿದಂತೆ ಹಲವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಅತ್ಯಂತ ಪ್ರಭಾವಿ ಕುಟುಂಬದಿಂದ ಬಂದವರು, ಅವರ ತಾತ ಪ್ರಧಾನಿಯಾಗಿದ್ದರು, ಚಿಕ್ಕಪ್ಪ ಮುಖ್ಯಮಂತ್ರಿಯಾಗಿದ್ದರು, ತಂದೆ ಸಚಿವರಾಗಿದ್ದರು, ಪ್ರಜ್ವಲ್‌ ರೇವಣ್ಣ ಖುದ್ದು ಸಂಸದರಾಗಿದ್ದಾರೆ. ಅವರ ವಿರುದ್ಧ ಹೋರಾಟ … Continue reading ಪ್ರಜ್ವಲ್‌ ರೇವಣ್ಣ ವಿರುದ್ಧ ಕಾಂಗ್ರೆಸ್‌ನ ನಾಯಕಿಯರ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ