ಹಿಂದುತ್ವ ಎಂದರೆ ಕೊಲೆ, ಹಿಂಸಾಚಾರ, ತಾರತಮ್ಯ : ಸಿದ್ದರಾಮಯ್ಯ

Social Share

ಕಲಬುರಗಿ,ಫೆ.7- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಕಲಬುರಗಿಯಲ್ಲಿ ಮಾಜಿ ಶಾಸಕ ಬಿ.ರ್ಆ.ಪಾಟೀಲ್ ಅವರ ಜೀವನಾಧಾರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಹಿಂದೂ ವಿರೋಧಿ ಅಲ್ಲ ಆದರೆ ಹಿಂದುತ್ವದ ವಿರೋಧಿ, ಹಿಂದುತ್ವ ಎಂದರೆ ಕೊಲೆ, ಹಿಂಸಾಚಾರ ಮತ್ತು ತಾರತಮ್ಯ ಎಂದು ನೀಡಿರುವ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಹಿಂದುತ್ವ ಸಂವಿಧಾನಕ್ಕೆ ವಿರುದ್ಧವಾಗಿದೆ, ಹಿಂದುತ್ವ ಮತ್ತು ಹಿಂದೂ ಧರ್ಮ ಬೇರೆ ಬೇರೆ, ನಾನು ಹಿಂದೂ ಧರ್ಮದ ವಿರೋಧಿಯಲ್ಲ, ನಾನು ಹಿಂದೂ. ಆದರೆ ಮನುವಾದ ಮತ್ತು ಹಿಂದುತ್ವವನ್ನು ವಿರೋಧಿಸುತ್ತೇನೆ. ಯಾವುದೇ ಧರ್ಮವು ಕೊಲೆ ಮತ್ತು ಹಿಂಸೆಯನ್ನು ಬೆಂಬಲಿಸುವುದಿಲ್ಲ ಆದರೆ ಹಿಂದುತ್ವ ಮತ್ತು ಮನುವಾದವು ಕೊಲೆ, ಹಿಂಸೆ ಮತ್ತು ತಾರತಮ್ಯವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು, ಹಿಂದುತ್ವದ ಬಗ್ಗೆ ಹೇಳಿಕೆ ನೀಡಿ ವಿವಾದ ಹುಟ್ಟು ಹಾಕುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಕಳೆದ ಜ. 8 ರಂದು ಅವರು ನಾನು ಹಿಂದೂ ಆದರೆ ಹಿಂದುತ್ವವನ್ನು ವಿರೋಧಿಸುತ್ತೇನೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದನ್ನು ವಿರೋಧಿಸುವುದಿಲ್ಲ ಆದರೆ, ಅದನ್ನು ರಾಜಕೀಯ ಲಾಭಕ್ಕಾಗಿ ಬಳಸುವುದನ್ನು ವಿರೋಧಿಸುತ್ತೇನೆ ಎಂದಿದ್ದರು.

ನಾಗಲ್ಯಾಂಡ್ ವಿಧಾನಸಭಾ ಚುನಾವಣೆ : ಕೇವಲ 6 ನಾಮಪತ್ರ ಸಲ್ಲಿಕೆ..!

2013ರಲ್ಲಿ ನಾವು 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಮತ್ತು 30 ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದೇವೆ. ಬಿಜೆಪಿ 2018 ರಲ್ಲಿ 600 ಭರವಸೆಗಳನ್ನು ನೀಡಿತು, ಅದರಲ್ಲಿ 50 ರಿಂದ 60 ಭರವಸೆಗಳನ್ನು ಈಡೇರಿಸಿಲ್ಲ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಪೆನ್ನು, ಪೆನ್ಸಿಲï, ಪುಸ್ತಕ, ಮೊಸರಿನ ಮೇಲೆ ಶೇ.18ರಷ್ಟು ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರ ಮೇಲೆ ಬಿಜೆಪಿ ಸರ್ಕಾರ ಹೆಚ್ಚಿನ ಹೊರೆ ಹಾಕಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

Congress, Siddaramaiah, Sparks Row, With, Hindutva, Hindu,

Articles You Might Like

Share This Article