ಬೆಂಗಳೂರು,ಅ.17- ಮನೆಗಳ್ಳತನ ಪ್ರಕರಣ ಸಂಬಂಧಿಸಿದಂತೆ ಪೊಲೀಸ್ ಕಾನ್ ಸ್ಟೆಬಲ್ ಒಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಂದ್ರಲೇಔಟ್, ಚಿಕ್ಕಜಾಲ, ಬನಶಂಕರಿ ಸೇರಿದಂತೆ ಹಲವೆಡೆ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಕಳ್ಳರಿಗೆ ಸಹಕಾರ ನೀಡಿದ ಆರೋಪದ ಮೇಲೆ ಕಾನ್‍ಸ್ಟೆಬಲ್ ಯಲ್ಲಪ್ಪ ಅವರನ್ನು ಬಂಧಿಸಲಾಗಿದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಕಾನ್‍ಸ್ಟೆಬಲ್‍ನನ್ನು
ಅಮಾನತುಗೊಳಿಸಿದ್ದಾರೆ. ಚಂದ್ರಲೇಔಟ್‍ನಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾಗ ಪೊಲೀಸರಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದರು. ಈ ಸಂದರ್ಭದಲ್ಲಿ ಅದರಲ್ಲಿ ಯಲ್ಲಪ್ಪ ಶಾಮೀಲಾಗಿರುವುದು ಗೊತ್ತಾಗಿ ಪೊಲೀಸರೇ ಶಾಕ್ ಆಗಿದ್ದಾರೆ.
ದೇಶದೊಂದಿಗೆ ಪಾಲುದಾರರಾಗಲು ಹೂಡಿಕೆದಾರರಿಗೆ ಮೋದಿ ಕರೆ
ಕೂಡಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ತನಿಖೆ ಚುರುಕುಗೊಳಿಸಿದಾಗ ಕಳ್ಳರೊಂದಿಗೆ ಇವರು ಕೂಡ ಭಾಗಿಯಾಗಿರುವುದು ಗೊತ್ತಾಗಿದೆ. ಕಳವು ಮಾಲ್‍ಗಳನ್ನು ಮಾರಾಟ ಮಾಡಿ ಅದರಲ್ಲಿ ಬಂದ ಹಣವನ್ನು ಹಂಚಿಕೊಳ್ಳುತ್ತಿರುವುದು ಕಂಡುಬಂದಿದ್ದು, ಪ್ರಸ್ತುತ ಕೆಲ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿ ಯಲ್ಲಪ್ಪ ಅವರು ಬನಶಂಕರಿ ಠಾಣೆಯಲ್ಲಿ ಅಪರಾಧ ವಿಭಾಗದ ಕಾನ್‍ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಈ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಪ್ರಸ್ತುತ ಆರೋಪಿಯನ್ನು ವಿಚಾರಣೆಗೊಳಪಡಿಸಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.