Thursday, December 5, 2024
Homeರಾಜ್ಯ200 ಕೋಟಿ ರೂ.ವೆಚ್ಚದಲ್ಲಿ 100 ಹೊಸ ಪೊಲೀಸ್‌‍ ಠಾಣೆಗಳ ನಿರ್ಮಾಣ : ಸಿಎಂ

200 ಕೋಟಿ ರೂ.ವೆಚ್ಚದಲ್ಲಿ 100 ಹೊಸ ಪೊಲೀಸ್‌‍ ಠಾಣೆಗಳ ನಿರ್ಮಾಣ : ಸಿಎಂ

Construction of 100 new police stations at a cost of Rs 200 crore: CM

ಬೆಂಗಳೂರು, ಅ. 21-ರಾಜ್ಯದಲ್ಲಿ 200 ಕೋಟಿ ರೂ.ವೆಚ್ಚದಲ್ಲಿ 100 ಹೊಸ ಪೊಲೀಸ್‌‍ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ನಗರದ ಮೈಸೂರು ರಸ್ತೆಯಲ್ಲಿರುವ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದ ಹುತಾತರ ಉದ್ಯಾನವನದಲ್ಲಿ ನಡೆದ ಪೊಲೀಸ್‌‍ ಸಂಸರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತರಾದ ಪೊಲೀಸ್‌‍ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು.

ಅಪರಾಧವನ್ನು ತಡೆಯಲು ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ನಗರಗಳಲ್ಲಿ 6 ಸಾವಿರ ಸಿಸಿ ಕ್ಯಾಮೆರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಅವರು ಮಾಹಿತಿ ನೀಡಿದರು.ಜನರ ಪ್ರಾಣ, ಆಸ್ತಿಗಳನ್ನು ರಕ್ಷಿಸುವ ಪೊಲೀಸ್‌‍ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದ್ದು, ಇದಕ್ಕಾಗಿ 2025ರಲ್ಲಿ 10 ಸಾವಿರ ಪೊಲೀಸ್‌‍ ವಸತಿ ಗೃಹಗಳ ನಿರ್ಮಾಣಕ್ಕೆ 2000 ಕೋಟಿ ರೂ ನೀಡಿದ್ದೇವೆ ಎಂದು ಅವರು ಹೇಳಿದರು.

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಪೊಲೀಸ್‌‍ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಅವರು ಘೋಷಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್‌‍ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತರಾಗಿದ್ದಾರೆ. ಇವರ ಆತಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತರಾಗಿದ್ದಾರೆ ಎಂದರು.

ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ ಪೊಲೀಸ್‌‍ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು. ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದು ಅವರು ತಿಳಿಸಿದರು.

ಕಾನೂನು ಸುವ್ಯವಸ್ಥೆಯಿಂದ ಜಿಡಿಪಿ: ಕಾನೂನು ಸುವ್ಯವಸ್ಥೆಗೂ ದೇಶದ ಜನರ ಜಿಡಿಪಿಗೂ ನೇರಾ ನೇರ ಸಂಬಂಧ ಇರುವುದನ್ನು ಮುಖ್ಯಮಂತ್ರಿಗಳು ವಿವರಿಸಿದರು.ಕಾನೂನು ಸುವ್ಯವಸ್ಥ್ಥೆ ಸಮರ್ಪಕವಾಗಿದ್ದರೆ ಮಾತ್ರ ಬಂಡವಾಳ ಹೂಡಿಕೆ ಹೆಚ್ಚಾಗುತ್ತದೆ. ಹೂಡಿಕೆಯಿಂದ ಉದ್ಯೋಗ ಸೃಷ್ಟಿ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿಯಿಂದ ಆರ್ಥಿಕತೆಯ ವೇಗ ಹೆಚ್ಚುತ್ತದೆ. ಆರ್ಥಿಕತೆಗೆ ವೇಗ ಬಂದರೆ ಅಭಿವೃದ್ಧಿ ಹೆಚ್ಚುತ್ತದೆ. ಅಭಿವೃದ್ಧಿ ಹೆಚ್ಚಾದರೆ ಜನರ ಜಿಡಿಪಿ, ತಲಾ ಆದಾಯವೂ ಹೆಚ್ಚುತ್ತದೆ ಎಂದರು.

ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಅಪರ ಮುಖ್ಯಕಾರ್ಯದರ್ಶಿ ಅತೀಕ್‌ ಎಲ್‌‍.ಕೆ., ಗೃಹ ಕಾರ್ಯದರ್ಶಿ ಉಮಾಶಂಕರ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್‌ ಅಹಮದ್‌, ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

RELATED ARTICLES

Latest News