Saturday, July 12, 2025
Homeರಾಜ್ಯಗೋವುಗಳ ಮೇಲಿನ ನಿರಂತರ ದಾಳಿ ಜಿಹಾದಿ ಶಕ್ತಿಗಳ ಷಡ್ಯಂತ್ರ : ಆರ್‌.ಅಶೋಕ್‌

ಗೋವುಗಳ ಮೇಲಿನ ನಿರಂತರ ದಾಳಿ ಜಿಹಾದಿ ಶಕ್ತಿಗಳ ಷಡ್ಯಂತ್ರ : ಆರ್‌.ಅಶೋಕ್‌

Continuous attacks on cows are a conspiracy of jihadi forces: R. Ashok R Ashok

ಬೆಂಗಳೂರು,ಜು.11- ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ. ಮತಾಂಧ ಶಕ್ತಿಗಳು, ಮೂಲಭೂತವಾದಿ ಶಕ್ತಿಗಳ ದೊಡ್ಡ ಜಿಹಾದಿ ಷಡ್ಯಂತ್ರವೇ ಇದ್ದಂತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಎಕ್‌್ಸನಲ್ಲಿ ಟ್ವೀಟ್‌ ಮಾಡಿರುವ ಅವರು, ಸರ್ಕಾರ ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಈ ದುಷ್ಕೃತ್ಯಗಳಿಗೆ ಕಡಿವಾಣ ಹಾಕದೆ ಹೋದರೆ, ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಚ್ಚರಿಕೆ ಎಂದು ಹೇಳಿದ್ದಾರೆ.

ಗೋಹಂತಕ ಕಾಂಗ್ರೆಸ್‌‍ ಸರ್ಕಾರಕ್ಕೆ ಗೋಹತ್ಯಾ ಶಾಪ ತಟ್ಟದೇ ಇರದು! ಬೆಂಗಳೂರಿನ ಚಾಮರಾಜಪೇಟೆ, ರಾಮನಗರ, ಹೊನ್ನಾವರ ತಾಲ್ಲೂಕಿನ ಸಾಲ್ಕೋಡ ಗ್ರಾಮ, ಶಿವಮೊಗ್ಗ ಜಿಲ್ಲೆಯ ಹೊಸನಗರ ಚಿಕ್ಕಮಗಳೂರಿನಲ್ಲಿ ಘಟನೆ ನಡೆದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗೋಮಾತೆಯ ಕೆಚ್ಚಲು ಕತ್ತರಿಸುವ ಅಮಾನುಷ ಕೃತ್ಯ ರಾಜ್ಯದಲ್ಲಿ ಪದೇ ಪದೇ ಮರುಕಳಿಸುತ್ತಲೇ ಇದ್ದು, ಚಿಕ್ಕಮಗಳೂರಿನಲ್ಲಿ ಗೋವಿನ ಮೇಲೆ ವಿಕೃತಿ ಮೆರೆಯುವ ಮೂಲಕ ಕಿಡಿಗೇಡಿಗಳು ಮತ್ತೊಮೆ ಕ್ರೌರ್ಯ ಪ್ರದರ್ಶನ ಮಾಡಿದ್ದಾರೆ.

ತುಷ್ಟೀಕರಣ, ಅರಾಜಕತೆಯಿಂದ ನಿಸ್ತೇಜವಾಗಿರುವ ಸಿಎಂ ಸಿದ್ದರಾಮಯ್ಯನವರ ಸರ್ಕಾರದ ಬಲಹೀನತೆಯನ್ನೇ ಬಂಡವಾಳವಾಗಿಸಿಕೊಂಡಿರುವ ಮತಾಂಧ ಶಕ್ತಿಗಳು, ಗೋವುಗಳ ಮೇಲೆ ಪ್ರಹಾರ ಮಾಡುವ ಮೂಲಕ ಹಿಂದೂಗಳಿಗೆ ಸವಾಲು ಹಾಕುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News