ಬೆಂಗಳೂರು,ಅ.12- ಗುತ್ತಿಗೆದಾರರ ಬಾಕಿ ಬಿಲ್‍ಗೆ ಸಂಬಂಧಪಟ್ಟಂತೆ ರಾಜ್ಯಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಹೋರಾಟಕ್ಕೆ ಮುಂದಾಗಿದೆ. ರಾಜ್ಯಸರ್ಕಾರ ರಚನೆಯಾಗಿ 5 ತಿಂಗಳು ಕಳೆದಿದ್ದರೂ ಬಾಕಿ ಬಿಲ್ ಪಾವತಿಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ತನಿಖೆಯ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ.
ದ್ದೇಶಪೂರ್ವಕವಾಗಿಯೇ ಕಾಮಗಾರಿಗಳ ಬಿಲ್ ಅನ್ನು ತಡೆಹಿಡಿಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿಂದೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರಿಕಾಗೋಷ್ಠಿ ನಡೆಸಿ ರಾಜ್ಯಸರ್ಕಾರದ ವಿರುದ್ಧ ಕಿಡಿಕಾರಿದರು. ಅದರ ನಂತರ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದಿಷ್ಟು ಬಾಕಿ ಬಿಲ್ ಪಾವತಿಯಾಗಿದ್ದವು. ಅದರ ಹೊರತಾಗಿಯೂ ಇನ್ನೂ ಸಾವಿರಾರು ಕೋಟಿ ರೂ.ಗಳು ಬಿಡುಗಡೆಯಾಗಬೇಕಿದೆ.
ಇಸ್ರೇಲ್‍ನಲ್ಲಿರುವ ಭಾರತೀಯರ ರಕ್ಷಣೆಗೆ ‘ಆಪರೇಷನ್ ಅಜಯ್’ ಕಾರ್ಯಾಚರಣೆ ಆರಂಭ
ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರದ ಮೇಲೆ ಒತ್ತಡ ಹೇರಲು ಗುತ್ತಿಗೆದಾರರ ಸಂಘ ಮುಂದಾಗಿದೆ. ನಾಳೆ ಬೆಳಿಗ್ಗೆ ಸಂಘದ ಸಭೆ ಕರೆಯಲಾಗಿದ್ದು, ಅಲ್ಲಿ ಮುಂದಿನ ಹೋರಾಟಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.
ರಾಜ್ಯಸರ್ಕಾರ ಲೋಕೋಪಯೋಗಿ, ಸಮಾಜ ಕಲ್ಯಾಣ, ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಬಿಬಿಎಂಪಿ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ಬಾಕಿ ಇರುವ ಬಿಲ್‍ಗಳನ್ನು ಶೀಘ್ರ ಬಿಡುಗಡೆ ಮಾಡುವಂತೆ ಒತ್ತಡ ಹೇರಲಾಗಿದೆ.