ಬೆಂಗಳೂರು,ಅ.14- ವಿವಿಧ ಕಾಮಗಾರಿಗಳ ಬಾಕಿ ಬಿಲ್ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುತ್ತಿಗೆದಾರರ ಸಂಘದ ಪ್ರತಿನಿಗಳ ಜೊತೆ ಸಮಾಲೋಚನೆ ನಡೆಸಿದರು. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರ ನಿಯೋಗ ಇಂದು ಮುಖ್ಯಮಂತ್ರಿಯವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದೆ.
ಬಾಕಿ ಬಿಲ್‍ಗಳ ಸಂಬಂಧಪಟ್ಟಂತೆ ನವೆಂಬರ್‍ವರೆಗೂ ಗಡುವು ನೀಡಿರುವ ಗುತ್ತಿಗೆದಾರರು ರಾಜ್ಯಸರ್ಕಾರ ಸ್ಪಂದಿಸದೇ ಇದ್ದರೆ ಉಗ್ರಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಲೋಕೋಪಯೋಗಿ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಬಿಬಿಎಂಪಿ, ಸಮಾಜ ಕಲ್ಯಾಣ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಾವಿರಾರು ಕೋಟಿ ರೂ.ಗಳ ಕಾಮಗಾರಿಗಳು ನಡೆದಿವೆ.
ಲಾಹೋಸ್ ಕಾರ್ಖಾನೆಯಲ್ಲಿ ಬಂಧಿಯಾಗಿದ್ದಾರೆ ಒಡಿಶಾದ 35 ಕಾರ್ಮಿಕರು
ಒಂದು ಅಂದಾಜಿನ ಪ್ರಕಾರ ಸುಮಾರು 20 ಸಾವಿರ ಕೋಟಿ ರೂ.ಗಳ ಬಿಲ್‍ಗಳು ಬಾಕಿ ಉಳಿದಿವೆ ಎಂದು ಹೇಳಲಾಗಿದೆ. ಈ ಕುರಿತು ಗುತ್ತಿಗೆದಾರರ ಸಂಘ ಪದೇಪದೇ ಆಕ್ಷೇಪ ವ್ಯಕ್ತಪಡಿಸುತ್ತಲೇ ಇದೆ. ಈ ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ನೀಡುವಾಗ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ, ಸಾಕಷ್ಟು ಅಕ್ರಮಗಳಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಅವುಗಳ ತನಿಖೆಗೆ ರಾಜ್ಯಸರ್ಕಾರ ಆದೇಶಿಸಿದೆ.
ಇದರ ಹೊರತಾಗಿಯೂ ಶೇ. 70 ರಷ್ಟು ಬಿಲ್‍ಗಳನ್ನು ಪಾವತಿಸಲಾಗುತ್ತಿದೆ ಎಂಬ ಮಾಹಿತಿ ಇದೆ. ಆದರೆ ರಾಜ್ಯಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಬಾಕಿ ಬಿಡುಗಡೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದ ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂಬುದು ಸಂಘದ ಪ್ರಮುಖ ಆರೋಪಿ.
ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಶೇ.40 ರಷ್ಟು ಕಮಿಷನ್‍ನ ಆರೋಪವನ್ನು ಗುತ್ತಿಗೆದಾರರ ಸಂಘ ಮಾಡಿತ್ತು. ಕಾಂಗ್ರೆಸ್ ಅದನ್ನೇ ಚುನಾವಣೆ ಅಸ್ತ್ರವನ್ನಾಗಿ ಬಳಸಿಕೊಂಡು ಗೆಲುವು ಕಂಡಿತ್ತು. ಅಕಾರಕ್ಕೆ ಬಂದ ಕಾಂಗ್ರೆಸ್ ಕೂಡ ಗುತ್ತಿಗೆದಾರರಿಗೆ ನೆರವಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆದಾರರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ.
ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..!
ಇಂದು ಕೆಂಪಣ್ಣ ಅವರ ನಿಯೋಗ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದು, ಹಲವಾರು ಸಮಸ್ಯೆಗಳನ್ನು ವಿವರಿಸಿದೆ. ಗುತ್ತಿಗೆದಾರರ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸುವುದಾಗಿ ಮತ್ತು ಹಣಕಾಸು ಲಭ್ಯತೆ ಆಧರಿಸಿ ಬಾಕಿ ಬಿಲ್‍ಗಳನ್ನು ಪಾವತಿ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಪದಾಕಾರಿಗಳು ತಿಳಿಸಿದ್ದಾರೆ.