Tuesday, January 14, 2025
Homeರಾಜ್ಯಕಾಂಗ್ರೆಸ್ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು, 7 ಸಚಿವರಿಗೆ ಪತ್ರ

ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು, 7 ಸಚಿವರಿಗೆ ಪತ್ರ

Contractors turn against Congress, write to 7 ministers

ಬೆಂಗಳೂರು,ಜ.13– ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದ ಗುತ್ತಿಗೆದಾರರು ಇದೀಗ ಕಾಂಗ್ರೆಸ್ ವಿರುದ್ಧವೂ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಪ್ರಮುಖ ಖಾತೆ ನಿರ್ವಹಿಸುತ್ತಿರುವ ಏಳು ಸಚಿವರಿಗೆ ಪತ್ರ ಬರೆದಿರುವ ಕರ್ನಾಟಕ ಕಂಟ್ರಾಕ್ಟರ್ರಸ ಅಸೋಸಿಯೇಷನ್ ಸಚಿವರುಗಳು ಹಾಗೂ ಕೆಲ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದೆ.

ಡಿಸಿಎಂ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಮಹದೇವಪ್ಪ, ಜಮೀರ್ ಅಹಮದ್, ಬೋಸರಾಜು, ದಿನೇಶ್ ಗುಂಡೂರಾವ್ ಹಾಗೂ ರಹೀಂ ಖಾನ್ ಅವರುಗಳಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.

ಗುತ್ತಿಗೆದಾರರ ಕುಂದು ಕೊರತೆಗಳ ಬಗ್ಗೆ ಹಾಗೂ ಗುತ್ತಿಗೆದಾರರ ಬಾಕಿ ಬಗ್ಗೆ ಸುಮಾರು ಸಲ ತಮ ಗಮನಕ್ಕೆ ತಂದಿರುತ್ತೇವೆ ಆದರೆ ತಾವುಗಳು ಇದುವರೆವಿಗೂ ನಮಗೆ ಯಾವುದೇ ಪತ್ರ ಸಹ ಬರೆದಿರುವುದಿಲ್ಲ ಹೀಗಾಗಿ ಸಭೆ ಕರೆದು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚಿಸಲು ಅವಕಾಶ ಮಾಡಿಕೊಡಬೇಕು ಎಂದು ಗುತ್ತಿಗೆದಾರರು ಮನವಿ ಮಾಡಿಕೊಂಡಿದ್ದಾರೆ.

ತಮ ಇಲಾಖೆಯ ಅಧಿಕಾರಿಗಳನ್ನು ನಾವು ಕೇಳಿದರೆ ಹಣ ಪಾವತಿಯಾಗಲಿ ಬೇರೆ ವಿಷಯದಲ್ಲಿ ಯಾವುದೇ ಸಮಸ್ಯೆಗಳಿದ್ದರು ಮಂತ್ರಿಗಳನ್ನು ಬೇಟಿ ಮಾಡಿ ಎಂದು ಹೇಳುತ್ತಾರೆ. ಹಣ ಪಾವತಿಸುವ ವಿಷಯದಲ್ಲಿ ಸಚಿವರು ಕೊಟ್ಟ ಪಟ್ಟಿಯ ಪ್ರಕಾರ ಜೇಷ್ಠತೆಯನ್ನು ಕಡೆಗಣಿಸಿ ಹಣ ಪಾವತಿಸಲು ಸೂಚಿಸಿರುತ್ತಾರೆ ಈ ತರಹ ಮಾಡಿದರೆ ನಮ ಎಲ್ಲಾ ಗುತ್ತಿಗೆದಾರರಿಗೂ ಅನ್ಯಾಯ ಮಾಡಿದಂತಾಗುತ್ತದೆ ನಾವು ಈ ಹಿಂದಿನ ಸರ್ಕಾರದ ವಿರುದ್ಧ ಹೋರಾಟ ಮಾಡಿರುವ ಬಗ್ಗೆ ತಮಗೆ ತಿಳಿದಿದೆ ಎಂದು ಅವರುಗಳು ಎಚ್ಚರಿಸಿದ್ದಾರೆ.

ನಾವು ಬರೆದಿರುವ ಪತ್ರಕ್ಕೆ 7 ದಿನಗಳ ಒಳಗಾಗಿ ನಮ ಸಂಘದ ಸಭೆ ಕರೆದು ಸಮಸ್ಯೆ ನಿವಾರಣೆ ಬಗ್ಗೆ ಚರ್ಚಿಸಬೇಕು. ಇಲ್ಲದಿದ್ದಲ್ಲಿ ನಾವು ಸಿಎಂ ಗಮನಕ್ಕೆ ತಂದು ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಗುತ್ತಿಗೆದಾರರ ಹಣ ವಾವತಿಸದಿದ್ದರೆ ಹೋರಾಟ: ಗುತ್ತಿಗೆದಾರರ ಸಂಘ ಆಕ್ರೋಶ
ಬಾಕಿ ಹಣ ಬಿಡುಗಡೆ ಆಗದಿದ್ದರೆ ದೊಡ್ಡ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ.60% ಕಮಿಷನ್ ಆರೋಪ ಹೊತ್ತಲ್ಲೇ ಗುತ್ತಿಗೆದಾರರ ಸಂಘ ಸರ್ಕಾರದ ಆರು ಸಚಿವರಿಗೆ ರಾಜ್ಯ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಸಚಿವರಾದ ದಿನೇಶ್ ಗುಂಡೂರಾವ್, ಹೆಚ್ಸಿ ಮಹಾದೇವಪ್ಪ, ಜಮೀರ್ ಅಹ್ಮದ್, ಪ್ರಿಯಾಂಕ್ ಖರ್ಗೆ, ಬೋಸರಾಜ್ಗೆ ಪತ್ರ ಬರೆದು ಬಾಕಿ ಹಣ ಬಿಡುಗಡೆ ಆಗದಿದ್ದರೆ ದೊಡ್ಡ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

ಹಣ ಪಾವತಿ ವಿಚಾರದಲ್ಲಿ ಇಲಾಖೆಯ ಅಧಿಕಾರಿಗಳು ಕೊಡುತ್ತಿರುವ ಉತ್ತರಕ್ಕೆ ಗುತ್ತಿಗೆದಾರರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು,ಬಿಲ್ ಹಣ ಪಾವತಿ ವಿಚಾರದ ಬಗ್ಗೆ ಮಂತ್ರಿಗಳನ್ನೇ ಭೇಟಿ ಮಾಡಿ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆಂದು ಪತ್ರದಲ್ಲಿ ತಿಳಿಸಲಾಗಿದೆ.

ಇದಲ್ಲದೆ ಸಚಿವರು ಕೊಟ್ಟ ಪಟ್ಟಿಯ ಪ್ರಕಾರ ಹಣ ಬಿಡುಗಡೆ ಆಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಜೇಷ್ಠತೆ ಕಡೆಗಣಿಸಿ ಹಣ ಬಿಡುಗಡೆ ಮಾಡಲು ಸಚಿವರು ಸೂಚಿಸಿದ್ದಾರೆ. ಇದರಿಂದ ಎಲ್ಲರಿಗೂ ಅನ್ಯಾಯವಾಗುತ್ತಿದೆ.

ಸುಮಾರು 30 ಸಾವಿರ ಕೋಟಿಯಷ್ಟು ಹಣ ಪಾವತಿಯಾಗಬೇಕಿದೆ. 7 ದಿನಗಳ ಒಳಗೆ ಗುತ್ತಿಗೆದಾರರ ಸಂಘದ ಸಭೆ ಕರೆದು ಸಮಸ್ಯೆ ಬಗೆಹರಿಸದಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೆ ತರಲು ತಯಾರಿ ಮಾಡಿದ್ದೇವೆಂದು ಗುತ್ತಿಗೆದಾರರ ಸಂಘ ಎಚ್ಚರಿಸಿದೆ.

RELATED ARTICLES

Latest News