Tuesday, May 21, 2024
Homeರಾಜ್ಯಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಕಂಟ್ರೋಲ್‌ ರೂಂ ಸ್ಥಾಪನೆ

ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಕಂಟ್ರೋಲ್‌ ರೂಂ ಸ್ಥಾಪನೆ

ಬೆಂಗಳೂರು,ಮೇ 6- ವಿಧಾನಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು, ಸಾರ್ವಜನಿಕರು, ಸಂಘ ಸಂಸ್ಥೆಗಳು ತಮ್ಮ ದೂರು, ಕುಂದು ಕೊರತೆಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ದೂರು ನಿವಾರಣಾ ಕೇಂದ್ರವನ್ನು ತೆರೆಯಲಾಗಿದೆ.

ಸಹಾಯವಾಣಿ ಸಂಖ್ಯೆ 080 – 22211106 ಅಥವಾ ಇ-ಮೇಲ್‌ deo.bangaloreu@gmail.com ಮೂಲಕ ಸಲ್ಲಿಸಬಹುದಾಗಿದೆ. ಅಲ್ಲದೆ ಸಾಮಾಜಿಕ ಜಾಲಾತಣಾಗಳಾದ face Book, Deputycommissioner, bengaluru urban, instagram ನಲ್ಲೂ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿ ಕಾರಿಗಳ ಪ್ರಕಟಣೆ ತಿಳಿಸಿದೆ.

ನಗರ ಜಿಲ್ಲಾ ವ್ಯಾಪ್ತಿಯ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ, ಆನೆಕಲ್‌ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ದೂರು ಮತ್ತು ಕುಂದುಕೊರತೆಗಳನ್ನು ನಿವಾರಿಸಿಕೊಳ್ಳಲು ನಗರದ ಕೆ.ಜಿ.ರಸ್ತೆಯಲ್ಲಿರುವ ಜಿಲ್ಲಾಧಿ ಕಾರಿಗಳ ಕಚೇರಿ ಆವರಣದ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘದ ಕಟ್ಟಡದ 2ನೇ ಮಹಡಿಯಲ್ಲಿ ಕಾರ್ಯ ನಿರ್ವಹಿಸುವ ಕಂಟ್ರೋಲ್‌ ರೂಂ ಅನ್ನು ಸಂಪರ್ಕಿಸಬಹುದಾಗಿದೆ.

RELATED ARTICLES

Latest News