Wednesday, May 21, 2025
Homeರಾಜ್ಯಬಿಜೆಪಿ ಕಾರ್ಯಕರ್ತರ ನೆರವಿಗೆ ಕಂಟ್ರೋಲ್ ರೂಂ : ವಿಜಯೇಂದ್ರ

ಬಿಜೆಪಿ ಕಾರ್ಯಕರ್ತರ ನೆರವಿಗೆ ಕಂಟ್ರೋಲ್ ರೂಂ : ವಿಜಯೇಂದ್ರ

ಬೆಂಗಳೂರು,ನ.26- ಬಿಜೆಪಿ ಕಾರ್ಯಕರ್ತರಿಗೆ ತೊಂದರೆ, ಕಿರುಕುಳ, ನೀಡಿದರೆ ಅವರಿಗೆ ಕಾನೂನಿನ ನೆರವು ನೀಡಲು ಅನುಕೂಲವಾಗುವಂತೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್‍ನ್ನು ತೆರೆಯುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂವಿಧಾನ ನಮಗೆ ಕೊಡ ಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ನೆರವಿಗೆ ಬರಲಿದೆ ಎಂದು ಅಭಯ ನೀಡಿದ್ದಾರೆ.

ಸಾಮಾಜಿಕ ಜಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೋಲಿಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಮೋದಿ ಪಂಜಾಬ್‍ ಭೇಟಿ ವೇಳೆ ಭದ್ರತಾಲೋಪ, ಮತ್ತೆ 6 ಪೊಲೀಸರ ಅಮಾನತು

ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ ಎಂದು ಧೈರ್ಯ ತುಂಬಿದ್ದಾರೆ.

RELATED ARTICLES

Latest News