ನಾಸಿಕ್, ಫೆ- 20-ಮಹಾರಾಷ್ಟ್ರದ ನಾಸಿಕ್ ನಗರದ ಪೊಲೀಸ್ ಠಾಣೆಯೊಂದರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ರೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ಸ್ಪೆಕ್ಟರ್ ಅಶೋಕ್ ನಜನ್ ಅವರು ಬೆಳಿಗ್ಗೆ ಅಂಬಾಡ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿ ತಮ್ಮ ಕ್ಯಾಬಿನ್ಗೆ ತೆರಳಿದ ಸ್ವಲ್ಪ ಸಮಯದಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಶಿಕ್ಷಕಿಯಿಂದ ಶ್ರೀರಾಮನಿಗೆ ಅಪಮಾನ ಪ್ರಕರಣ : ವಿದೇಶಗಳಿಂದ ಪೋಷಕರಿಗೆ ಬೆದರಿಕೆ ಕರೆ
ಗುಂಡಿನ ಸದ್ದು ಕೇಳಿದ ಠಾಣೆಯ ಸಿಬ್ಬಂದಿ ಒಳಗೆ ಹೋಗಿ ನೋಡಿದ್ದಾಗ ಕುರ್ಚಿಯ ಮೇಲೆ ಅಶೋಕ್ ನಜನ್ ನಿರ್ಜೀವನಾಗಿದ್ದರು ನಂತರ ದೇಹವನ್ನು ಜಿಲ್ಲೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಅವರು ಹೇಳಿದರು.
ಘಟನೆಯ ನಂತರ ಪೊಲೀಸ್ ಕಮಿಷನರ್ ಸಂದೀಪ್ ಕಾರ್ಣಿಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದರು.