Friday, May 23, 2025
Homeರಾಷ್ಟ್ರೀಯ | Nationalದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಳ, ಆಂಧ್ರದಲ್ಲಿ ಮಾಸ್ಕ್‌ ಕಡ್ಡಾಯ

ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಳ, ಆಂಧ್ರದಲ್ಲಿ ಮಾಸ್ಕ್‌ ಕಡ್ಡಾಯ

Corona cases increase again in the country, masks made mandatory in Andhra

ನವದೆಹಲಿ, ಮೇ 23– ದೇಶದಲ್ಲಿ ಮತ್ತೆ ಕೊರೊನಾ ಸೋಂಕು ವಕ್ಕರಿಸುವ ಸಾಧ್ಯತೆ ಇರುವುದರಿಂದ ನೆರೆಯ ಆಂಧ್ರದಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್‌ ಕೇಸ್‌‍ ದಾಖಲಾಗಿದೆ.

ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಹೀಗಾಗಿ ಭವಿಷ್ಯದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಆಂಧ್ರ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಿದೆ.

RELATED ARTICLES

Latest News