ಭಾರತದಲ್ಲಿ ಮತ್ತೆ ಕೊರೊನಾ ಅಬ್ಬರ: ಒಂದೇ ದಿನ 24,492 ಜನರಲ್ಲಿ ಸೋಂಕು ಪತ್ತೆ

ನವದೆಹಲಿ,ಮಾ.16-ಸತತ ಆರು ದಿನಗಳಿಂದ ಪ್ರತಿನಿತ್ಯ 20 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದು, ನಿನ್ನೆ 24,492 ಮಂದಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ದೇಶದ ಕೊರೊನಾ ಪೀಡಿತರ ಸಂಖ್ಯೆ 1.14 ಕೋಟಿಗೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಸೋಂಕಿಗೆ 131 ಸಾವು ಪ್ರಕರಣಗಳ ಸಂಭವಿಸುವ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,58,856ಕ್ಕೆ ಹೆಚ್ಚಳಗೊಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಲ್ಲಿ ಉಲ್ಲೇಖವಾಗಿದೆ.

ಸತತ ಆರು ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ದೇಶದಲ್ಲಿ ಸಕ್ರಿಯ ಕೊರೊನಾ ಪೀಡಿತರ ಸಂಖ್ಯೆ 2,23,432ಕ್ಕೆ ಹೆಚ್ಚಳವಾಗಿರುವುದದಿಂದ ಚೇತರಿಕೆ ಪ್ರಮಾಣ ಶೇ.96.65ಕ್ಕೆ ಕುಸಿತಗೊಂಡಿದೆ.