ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15,144 ಮಂದಿಗೆ ಕೊರೊನ ಸೋಂಕು ದೃಢ

ನವದೆಹಲಿ, ಜ.17- ಮಹಾಮಾರಿ ಕೊರೊನಾ ಲಸಿಕೆ ಅಭಿಯಾನ ಆರಂಭಗೊಂಡ ನಂತರವೂ ಪಶ್ಚಿಮ ಬಂಗಾಳ ಹಾಗೂ ಪೂರ್ವೋತ್ತರ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಇದರಿಂದಾಗಿ ಕಳೆದ 24 ಗಂಟೆಗಳಲ್ಲಿ 15,144 ಹೊಸ ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಒಟ್ಟಾರೆ ಸೋಂಕಿತರ ಸಂಖ್ಯೆ 1.57 ಕೋಟಿಗೆ ಏರಿಕೆಯಾಗಿದ್ದು, ಮೃತರ ಸಂಖ್ಯೆಯೂ ಕೂಡ 1,52,274ಕ್ಕೆ ಮುಟ್ಟಿದೆ.

ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು , ಗುಜರಾತ್ ಮತ್ತು ರಾಜಸ್ತಾನದಲ್ಲೂ ಆತಂಕ ಸೃಷ್ಟಿಯಾಗಿದೆ. ಪುಟ್ಟ ರಾಜ್ಯಗಳಾದ ತ್ರಿಪುರಾ, ಮೇಘಾಲಯ, ಅಸ್ಸಾಂ, ಒಡಿಸ್ಸಾದಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.