ನವದೆಹಲಿ.ಜು.21- ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 21,566 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆಯ ಭೀತಿ ಮತ್ತಷ್ಟು ಹೆಚ್ಚುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಸೊಂಕಿತರಲ್ಲಿ ಬಹುತೇಕರು ಕೊರೊನಾ ಲಸಿಕೆ ಪಡೆದಿದಾರೆ ಎಂಬ ಮಾಹಿತಿ ಇದೆ.
ಸಕ್ರಿಯ ಪ್ರಕರಣಗಳು 1,48,881ಕ್ಕೆ ಏರಿದ್ದು ಇದೇ ವೇಳೆ18,294ಮಂದಿ ಗುಣಮುಖರಾಗಿದ್ದಾರೆ. ದೇಶದ 9ರಾಜ್ಯದಲ್ಲಿ ಕರೋನಾ ಹೆಚ್ಚಳವಾಗುತಿದ್ದು ಆತಂಕ ಮೂಡಿಸಿದೆ.ತರ್ತು ಕ್ರಮಕ್ಕೆ ಆರೋಗ್ಯ ಇಲಾಖೆ ಸೂಚಿಸಿದೆ.
ಕೊರೊನಾ ಸೋಂಕಿನ ವಿರುದ್ಧ ವಿಶ್ವದಲ್ಲೇ ಅತಿದೊಡ್ಡ ಲಸಿಕಾಕರಣವನ್ನು ಪ್ರಾರಂಭಿಸಿದ ಭಾರತವು 18 ತಿಂಗಳಲ್ಲಿ 200 ಕೋಟಿ ಡೋಸ್ ಲಸಿಕೆಯನ್ನು ನೀಡುವ ಮೂಲಕ ದಾಖಲೆಯನ್ನು ಸೃಷ್ಟಿಸಿದೆ.
ಭಾರತದಲ್ಲಿ 2021ರ ಜನವರಿ 16ರಂದು ಲಸಿಕೆಯನ್ನು ನೀಡಲು ಪ್ರಾರಂಭಿಸಲಾಯಿತು. ಈವರೆಗೆ ದೇಶದಲ್ಲಿ 200 ಕೋಟಿ ಡೋಸ್ ಲಸಿಕೆಯನ್ನು ನೀಡುವ ಮೂಲಕ ಮೈಲುಗಲ್ಲನ್ನು ಸಾಧಿಸಿದೆ