ನವದೆಹಲಿ, ಜು.22- ನಾಲ್ಕೈದು ದಿನಗಳಿಂದ ತಗ್ಗಿದ್ದ ಕೊರೊನಾ ಸೋಂಕು ಮತ್ತೆ ಅಬ್ಬರಿಸಿದ್ದು, 21 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಆತಂಕಕಾರಿ ಬೆಳವಣಿಯಲ್ಲಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬೆಳಗ್ಗೆ ಬಿಡುಗಡೆ ಮಾಡಿದ ದೈನಂದಿನ ವರದಿಯಲ್ಲಿ 21,880 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿನ ಪ್ರಮಾಣ 4,38,47,065 ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,49,482 ಕ್ಕೆ ಏರಿದೆ ಸಚಿವಾಲಯ ತಿಳಿಸಿದೆ.
ಕೇರಳದಲ್ಲಿ 22, ಛತ್ತೀಸ್‍ಗಢದಲ್ಲಿ ಏಳು, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ತಲಾ ಆರು, ಹಿಮಾಚಲ ಪ್ರದೇಶದಲ್ಲಿ ಮೂರು, ಅಸ್ಸಾಂ, ಗುಜರಾತ್, ಮಣಿಪುರ, ಮೇಘಾಲಯ ರಾಜ್ಯಗಳಲ್ಲಿ ತಲಾ ಇಬ್ಬರು, ಬಿಹಾರ, ದೆಹಲಿ, ಗೋವಾ, ಕರ್ನಾಟಕ, ನಾಗಾಲ್ಯಾಂಡ್, ರಾಜಸ್ಥಾನ, ತಮಿಳುನಾಡು ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ತಲಾ ಒಬ್ಬರು ಸೇರಿ ನಿನ್ನೆ 60 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಜೀವ ಹಾನಿ 5,25,930 ಕ್ಕೆ ಏರಿದೆ. ಮರಣದ ಪ್ರಮಾಣ ಶೇ.1.20ರಷ್ಟಾಗಿದೆ.
ಒಟ್ಟು ಸೋಂಕಿನಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.34ರಷ್ಟಾಗಿದೆ. ಚೇತರಿಕೆ ದರ ಶೇ.98.46ರಷ್ಟಿದ್ದು 4,31,71,653 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 24 ಗಂಟೆಗಳ ಅವಯಲ್ಲಿ 601 ಸಕ್ರಿಯ ಪ್ರಕರಣಗಳು ಹೆಚ್ಚಾಗಿವೆ. ದೈನಂದಿನ ಪಾಸಿಟಿವಿಟಿ ದರ ಶೇ.4.42 ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದಲ್ಲಿ ಇದುವರೆಗೆ 201.30 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.