ಆತ್ಮಹತ್ಯೆಗೆ ಶರಣಾದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತ್ನಿ..!

ಬೆಂಗಳೂರು, ಅ.27- ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೀಗೆಹಳ್ಳಿಯಲ್ಲಿರುವ ಅವರ ಮನೆಯಲ್ಲಿ ವಿನೋದಾ (30) ಅವರು ವೇಲ್‍ನಿಂದ ಫ್ಯಾನ್‍ಗೆ ನೇಣು ಬಿಗಿದುಕೊಂಡಿದ್ದು, ಇದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅವರನ್ನು ಭಟ್ಟರಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಜಯಪ್ರಕಾಶ್ (ಜೆಪಿ) ಅವರ ಪತ್ನಿ ವಿನೋದಾ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.  ಈ ಬಗ್ಗೆ ಕೆ.ಆರ್.ಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.