ಬಿಜೆಪಿ ಸದಸ್ಯತ್ವದಿಂದಲೇ ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ..?

Social Share

ಬೆಂಗಳೂರು,ಮಾ.6- ರಾಸಾಯನಿಕ ವಸ್ತುಗಳನ್ನು ಪೂರೈಕೆ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು ಸರ್ಕಾರ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಹಿನ್ನಲೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟಿಸಲು ನಿರ್ಧರಿಸಲಾಗಿದೆ.

ನಾಳೆ ಸಂಜೆಯೊಳಗೆ ಅಧಿಕೃತ ಆದೇಶ ಪಕ್ಷದಿಂದ ಹೊರಬೀಳಲಿದ್ದು, ಒಂದು ವೇಳೆ ಮಾಡಾಳ್ ವಿರೂಪಾಕ್ಷಪ್ಪ ಪಕ್ಷದಿಂದ ಉಚ್ಛಾಟನೆಯಾದರೆ ಇತ್ತೀಚೀನ ದಿನಗಳಲ್ಲೇ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡ ದಿಟ್ಟ ನಿಲುವು ಇದಾಗಲಿದೆ.

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷದ ಪ್ರಧಾನ ವಕ್ತಾರ ಮಹೇಶ್ ಅವರು ಪ್ರತ್ಯೇಕವಾಗಿ ಹೇಳಿಕೆ ನೀಡಿದ್ದು, ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಶಿಸ್ತುಕ್ರಮವಾಗಲಿದೆ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿಯಿಂದಲೇ ಗೇಟ್‍ಪಾಸ್ ನೀಡುವ ಸುಳಿವು ಕೊಟ್ಟಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಬಿಜೆಪಿ ವರಿಷ್ಠರು ವರದಿ ನೀಡಬೇಕೆಂದು ರಾಜ್ಯ ಶಿಸ್ತು ಸಮಿತಿಗೆ ಸೂಚನೆ ಕೊಟ್ಟಿತ್ತು. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರತಿಪಕ್ಷಗಳು ಇದನ್ನು ಅಸ್ತ್ರ ಮಾಡಿಕೊಳ್ಳಬಹುದೆಂಬ ಆತಂಕ ಬಿಜೆಪಿಗೆ ಎದುರಾಗಿದೆ.

65 ಕಾನೂನುಗಳನ್ನು ರದ್ದುಗೊಳಿಸಲು ಸಂಸತ್‍ನಲ್ಲಿ ಮಸೂದೆ ಮಂಡನೆ

ವಿಳಂಬ ಮಾಡಿದಷ್ಟು ಸರ್ಕಾರ ಮತ್ತು ಪಕ್ಷಕ್ಕೆ ಹಾನಿಯಾಗಲಿದೆ ಎಂಬುದನ್ನು ಅರಿತಿರುವ ಬಿಜೆಪಿ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದ್ದು, ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರದಲ್ಲಿ ಬಿಜೆಪಿ ರಾಜಿಯಾಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಲಿದೆ.

ಉಚ್ಛಾಟನೆಗೆ ಶಿಫಾರಸ್ಸು:
ರಾಜ್ಯ ಶಿಸ್ತು ಸಮಿತಿ ಕೂಡ ಮಾಡಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಕೇಂದ್ರ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಿದೆ ಎಂದು ತಿಳಿದುಬಂದಿದೆ. ಅವರ ಪುತ್ರ ಪ್ರಶಾಂತ್ ಮಾಡಾಳ್ ಈ ಪ್ರಕರಣದಲ್ಲಿ ನೇರವಾಗಿ ಶಾಮೀಲಾಗಿದ್ದಾನೆ. ಅವರ ಕಚೇರಿಯಲ್ಲಿ 1 ಕೋಟಿ 62 ಲಕ್ಷ ಹಾಗೂ ಮನೆಯಲ್ಲಿ 6 ಕೋಟಿ ಅಕ ನಗದು ಸಿಕ್ಕಿದೆ.

ವಿರೂಪಾಕ್ಷಪ್ಪ ನಿರ್ದೇಶನವಿಲ್ಲದೆ ಹಣವನ್ನು ಸ್ವೀಕರಿಸಲು ಅಸಾಧ್ಯ. ಯಾವ ಹಂತದಲ್ಲೂ ಇದನ್ನು ಸಮರ್ಥನೆ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸಬೇಕೆಂದು ರಾಜ್ಯ ಬಿಜೆಪಿ ಶಿಸ್ತು ಘಟಕ ವರದಿ ಕೊಟ್ಟಿದೆ. ಈ ವರದಿ ಅನುಸಾರ ಕೇಂದ್ರ ಶಿಸ್ತು ಸಮಿತಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಉಚ್ಛಾಟನೆ ಮಾಡುವಂತೆ ನಿರ್ದೇಶನ ನೀಡಿದೆ ಎನ್ನಲಾಗುತ್ತಿದೆ.

ಮನೆ ಬಾಗಿಲಿಗೆ ಚಿಕಿತ್ಸೆ, ಪರೀಕ್ಷಾ ಸೌಲಭ್ಯ ತಲುಪಿಸಲು ಸರ್ಕಾರದ ಪ್ರಯತ್ನ: ಮೋದಿ

ಕುಟುಂಬದವರಿಗೂ ಟಿಕೆಟ್ ಇಲ್ಲ:
ಒಂದು ವೇಳೆ ಉಚ್ಛಾಟನೆಗೊಂಡರೆ ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಚನ್ನಗಿರಿ ಕ್ಷೇತ್ರದಿಂದ ಅವರ ಕುಟುಂಬದವರಿಗೂ ಸಹ ಟಿಕೆಟ್ ನೀಡದಿರಲು ಬಿಜೆಪಿ ತೀರ್ಮಾನಿಸಿದೆ. ಕುಟುಂಬದವರಿಗೆ ಟಿಕೆಟ್ ಕೊಟ್ಟರೆ ಮತ್ತೆ ಪಕ್ಷದ ಮೇಲೆ ಆಪಾದನೆ ಬರುತ್ತದೆ ಎಂಬ ಹಿನ್ನಲೆಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ತೀರ್ಮಾನಕ್ಕೆ ಬರಲಾಗಿದೆ.

ರಕ್ಷಣೆ ಇಲ್ಲ: ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ ಕುರಿತಂತೆ ಕಲಬುರಗಿಯ ಜೇವರ್ಗಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಯಾವುದೇ ಕಾರಣಕ್ಕೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾನೂನಿನ ಪ್ರಕಾರ ಏನು ಶಿಕ್ಷೆಯಾಗಬೇಕೋ ಅದು ಆಗಲಿದೆ. ಮಂಗಳವಾರದೊಳಗೆ ಅವರು ಬಂಧನವಾಗಬಹುದು. ನಮ್ಮ ಪಕ್ಷ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ. ತಪ್ಪು ಯಾರೇ ಮಾಡಿದರೂ ತಪ್ಪು. ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ.ಪಕ್ಷದ ಶಿಸ್ತು ಸಮಿತಿ ಖಂಡಿತವಾಗಿಯೂ ಅತ್ಯುಗ್ರ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಹೈಕಮಾಂಡ್ ನಾಯಕರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.ಅವರ ವಿರುದ್ಧ ಕ್ರಮ ಕೈಗೊಳ್ಳಲು ನಾವೇ ಮನವಿ ಮಾಡಿದ್ದೇವೆ. ಪ್ರಕರಣವನ್ನು ಮುಚ್ಚಿ ಹಾಕುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದರು.
ಪಕ್ಷದ ಮುಖ್ಯ ವಕ್ತಾರ ಎನ್.ಮಹೇಶ್ ಕೂಡ ಇದೇ ಸುಳಿವು ನೀಡಿದ್ದು, ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಖಂಡಿತವಾಗಿಯೂ ಅತ್ಯುನ್ನತ ಶಿಕ್ಷೆಯಾಗಲಿದೆ. ಒಂದೆರಡು ದಿನಗಳಲ್ಲಿ ಇದು ಅಕೃತ ಆದೇಶ ಹೊರಬೀಳಲಿದೆ ಎಂದರು.

65 ಕಾನೂನುಗಳನ್ನು ರದ್ದುಗೊಳಿಸಲು ಸಂಸತ್‍ನಲ್ಲಿ ಮಸೂದೆ ಮಂಡನೆ

ಕಳೆದ ಗುರುವಾರ ಗುತ್ತಿಗೆದಾರರಿಂದ ಲಂಚ ಪಡೆಯುವ ವೇಳೆ ಬಿಡಬ್ಲ್ಯುಎಸ್‍ಎಸ್‍ಬಿ ಮುಖ್ಯ ಲೆಕ್ಕ ಪರಿಶೋಧಕ ಹಾಗೂ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ತನಿಖಾ ತಂಡಕ್ಕೆ ಸಿಕ್ಕಿಬಿದ್ದಿದ್ದರು.
ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿದೆ. ಪ್ರತಿಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಒತ್ತಾಯಿಸಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿತ್ತು. ಈಗ ಗುರುವಾರ ಕರ್ನಾಟಕ ಬಂದ್‍ಗೂ ಸಹ ಕರೆ ಕೊಟ್ಟಿದೆ.

corruption, Modal Virupakshappa, BJP, membership ,

Articles You Might Like

Share This Article