Thursday, December 12, 2024
Homeರಾಷ್ಟ್ರೀಯ | Nationalಮಹಾರಾಷ್ಟ್ರದಲ್ಲಿ ಅಕ್ರಮವಾಗಿ ತಂಗಿದ್ದ ಬಾಂಗ್ಲಾ ಪ್ರಜೆಗಳ ಬಂಧನ

ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ತಂಗಿದ್ದ ಬಾಂಗ್ಲಾ ಪ್ರಜೆಗಳ ಬಂಧನ

Couple among 3 Bangladeshi nationals held for illegal stay in Navi Mumbai

ಥಾಣೆ, ಅ.24 (ಪಿಟಿಐ) ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಅಕ್ರಮವಾಗಿ ತಂಗಿದ್ದ ಆರೋಪದ ಮೇಲೆ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ

ಖಚಿತ ಸುಳಿವಿನ ಮೇರೆಗೆ ನವಿ ಮುಂಬೈ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಸಿಬ್ಬಂದಿ ತಲೋಜಾ ಪ್ರದೇಶದ ವಸತಿ ಆವರಣದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ನವಿ ಮುಂಬೈನ ಫ್ಲಾಟ್ ನಲ್ಲಿ ಅಕ್ರಮವಾಗಿ ನೆಲೆಸಿದ್ದ 28 ರಿಂದ 37 ವರ್ಷ ವಯಸ್ಸಿನ ಬಾಂಗ್ಲಾದೇಶದ ದಂಪತಿ ಮತ್ತು 35 ವರ್ಷದ ಇನ್ನೊಬ್ಬ ಮಹಿಳೆಯನ್ನು ಅವರು ಸೆರೆ ಹಿಡಿದಿದ್ದಾರೆ ಎಂದು ತಲೋಜಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ ಮತ್ತು ವಿದೇಶಿಯರ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News