ಬೆಂಗಳೂರು,ನ.2- ಆ್ಯಂಬುಲೆನ್ಸ್ ವೊಂದು ವೇಗವಾಗಿ ಬಂದು ಸಿಗ್ನಲ್‌ನಲ್ಲಿ ನಿಂತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ಘಟನೆ ವಿಲ್ಸನ್‌ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮೇಶ್ವರನಗರ ನಿವಾಸಿಗಳಾದ ಇಸಾಯಿಲ್(40), ಸಮೀನಾ ಬಾನು(35) ಮೃತಪಟ್ಟ ದಂಪತಿ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ರಾತ್ರಿ 11.15ರ ಸಂದರ್ಭದಲ್ಲಿ ಶಾಂತಿನಗರ ಬಸ್ ನಿಲ್ದಾಣ ಬಳಿ(ಡಬಲ್ ರೋಡ್) ಟ್ರಾಫಿಕ್ ಸಿಗ್ನಲ್‌ನಲ್ಲಿ ಕೆಂಪು ದ್ವೀಪ(ರೆಡ್ ಸಿಗ್ನಲ್) ಇದಿದ್ದರಿಂದ ವಾಹನಗಳು ನಿಂತಿದ್ದವು. ಈ ವೇಳೆ ವೇಗವಾಗಿ ಬಂದ ಆ್ಯಂಬುಲೆನ್‌್ಸ ನಿಂತಿದ್ದ ವಾಹನಗಳು ಹಾಗೂ ಪೊಲೀಸ್ ಚೌಕಿಗೆ ಡಿಕ್ಕಿ ಹೊಡೆದಿದೆ.
ಇದರಲ್ಲಿ ಮೂರು-ನಾಲ್ಕು ಬೈಕ್‌ಗಳಿಗೆ ಹಾನಿಯಾಗಿದ್ದು, ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ ದಂಪತಿ ಇಸಾಯಿಲ್, ಸಮೀನಾ ಬಾನು ಅವರು ಸಾವನ್ನಪ್ಪಿದ್ದಾರೆ. ಆ್ಯಂಬುಲೆನ್‌್ಸ ಇವರ ದ್ವಿಚಕ್ರ ವಾಹನವನ್ನು 50 ಅಡಿ ಉದ್ದಕ್ಕೆ ಉಜ್ಜಿಕೊಂಡು ಮುಂದೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿಲ್ಸನ್‌ಗಾರ್ಡನ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಆ್ಯಂಬುಲೆನ್‌್ಸನಲ್ಲಿ ಯಾವುದೇ ರೋಗಿಗಳು ಇರಲಿಲ್ಲ. ಚಾಲಕನ ಅಜಾಗರೂಕತೆಯಿಂದ ಚಾಲನೆ ಮಾಡಿರುವುದೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
