Saturday, November 1, 2025
Homeಜಿಲ್ಲಾ ಸುದ್ದಿಗಳು | District Newsಬೆಳಗಾವಿ | Belagaviಬೈಕ್‌ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ನದಿಗೆ ಬಿದ್ದು ದಂಪತಿ ಸಾವು

ಬೈಕ್‌ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ನದಿಗೆ ಬಿದ್ದು ದಂಪತಿ ಸಾವು

couple dies after motorcycle falls off ghataprabha bridge

ಚಿಕ್ಕೋಡಿ,ಅ.17-ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ನಿಯಂತ್ರಣ ತಪ್ಪಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಘಟಪ್ರಭಾ ನದಿಯ ಸೇತುವೆ ಮೇಲೆ ನಡೆದಿದೆ.

ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದ ಸುರೇಶ ಬಡಿಗೇರ (53), ಜಯಶ್ರೀ ಬಡಿಗೇರ(45) ಮೃತ ದಂಪತಿ. ಘೋಡಗೇರಿ ಗ್ರಾಮದಿಂದ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್‌ ಮೇಲೆ ತೆರಳುವಾಗ ನೊಗನಿಹಾಳ ಗ್ರಾಮದ ಬಳಿ ಸೇತುವೆ ದಾಟುವಾಗ ಈ ದುರಂತ ಸಂಭವಿಸಿದೆ.

ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ
- Advertisement -

ನದಿಯಲ್ಲಿನ ಜಯಶ್ರೀ ಶವವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸುರೇಶ ಶವಕ್ಕಾಗಿ ಹುಡುಕಾಟ ಮುಂದುವರೆದಿದೆ. ಸೇತುವೆಗೆ ತಡೆಗೋಡೆ ನಿರ್ಮಿಸದೇ ನೀರಾವರಿ ಇಲಾಖೆಯ ನಿರ್ಲಕ್ಷ್ಯ ಮಾಡಿದ್ದರಿಂದ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ.ಸ್ಥಳಕ್ಕೆ ಹಿರಿಯ ಪೊಲೀಸ್‌‍ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹುಕ್ಕೇರಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
RELATED ARTICLES

Latest News