Tuesday, July 2, 2024
Homeಜಿಲ್ಲಾ ಸುದ್ದಿಗಳುಬೆಳಗಾವಿ : ಸಿಲಿಂಡರ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಸಾವು

ಬೆಳಗಾವಿ : ಸಿಲಿಂಡರ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಸಾವು

ಬೆಳಗಾವಿ, ಮೇ 25- ಸಿಲಿಂಡರ್‌ ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಾಕತಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಸುಳ್ಯ ಗ್ರಾಮದ ಕಲ್ಲಪ್ಪ ಪಾಟೀಲ (63) ಮತ್ತು ಸುಮನಾ ಪಾಟೀಲ (60) ಮೃತಪಟ್ಟ ದಂಪತಿ.ಮೇ 18 ರಂದು ಇವರ ಮನೆಯಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು.ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ ದಂಪತಿ ಮೃತಪಟ್ಟಿದ್ದಾರೆ.

RELATED ARTICLES

Latest News