ಬೆಂಗಳೂರು,ಫೆ.6- ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಲ್ವರಿಗೆ 10 ಸಾವಿರ ದಂಡ ಹಾಗೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈ ಕೋರ್ಟ್‍ನ ಜನಪ್ರತಿನಿಧಿ ನ್ಯಾಯಾಲಯ ಕಟ್ಟು ನಿಟ್ಟಿನ ಸೂಚನೆ ನೀಡಿದೆ.
ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಚಿವರಾದ ರಾಮಲಿಂಗ ರೆಡ್ಡಿ, ಎಂ.ಬಿ.ಪಾಟೀಲ್ ಅವರುಗಳಿಗೆ ದಂಡ ವಿಧಿಸಿದೆ.
ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.ತಮ್ಮ ವಿರುದ್ದ ದಾಖಲಾಗಿದ್ದ ಅರ್ಜಿಯ ವಿಚಾರಣೆಯನ್ನು ರದ್ದು ಪಡಿಸಬೇಕು ಎಂದು ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಹೈಕೋರ್ಟ್‍ನ ಜನಪ್ರತಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, 10 ಸಾವಿರ ದಂಡ ವಿಧಿಸಿ ಅರ್ಜಿಗಳನ್ನು ವಜಾಗೊಳಿಸಿದೆ.
ಅಲ್ಲದೆ ಸಂಬಂಧಪಡದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.ಮಾ.6ರಂದು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ಸೂಚಿಸಿದೆ. ಅದೇ ರೀತಿ ಮಾ.7ರಂದು ರಾಮಲಿಂಗ ರೆಡ್ಡಿ, ಮಾ.11 ಸುರ್ಜೆವಾಲಾ, ಮಾ.15ರಂದು ಎಂ.ಬಿ. ಪಾಟೀಲ್ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಿದೆ.
ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್
ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನರು ಕೂಡಾ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟ ಎದುರಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್, ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ತ್ರಾಸದಾಯಕ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್‍ರಿದ್ದ ಹೈಕೋರ್ಟ್ ಪೀಠ ತುಸು ಖಾರವಾಗಿಯೇ ಪ್ರತಿಕ್ರಿಯಿಸಿತು.
ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರರಕಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಳೆದ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟಿಸಿದ್ದರು.
ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ದೂರು ದಾಖಲಿಸಲಾಗುತ್ತದೆ.
ಭಾರತದ ಸಮುದ್ರ ರಕ್ಷಣೆಗೆ ಬಂತು ಅಮೆರಿಕದ MQ9-B ಡ್ರೋನ್
ಪ್ರಕರಣವೇನು? :
ಬೊಮ್ಮಾಯಿ ನೇತೃತ್ವದ ಬಿಜೆಪಿ ಅಧಿಕಾರದಲ್ಲಿದ್ದ ಸಮಯದಲ್ಲಿ ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. ಇದರಲ್ಲಿ ಆಗಿನ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬಂದಿತ್ತು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದು, ಕಾನೂನು ಸುವ್ಯಸ್ಥೆಗೆ ಭಂಗ ಉಂಟು ಮಾಡಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಇತ್ಯಾದಿ ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ ಪಾಟೀಲ, ಸುರ್ಜೆವಾಲ ಅವರು ಹೈಕೋರ್ಟ್ ಮೊರೆ ಹೋಗಿದ್ದರು.