ನವದೆಹಲಿ, ಜು.30- ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, 24 ಗಂಟೆಯಲ್ಲಿ 20,408 ಹೊಸ ಪ್ರಕರಣಗಳು ಪತ್ತೆಯಾಗಿವೆ. 54 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಮತ್ತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಟ್ಟು ಸೋಂಕಿತರ ಸಂಖ್ಯೆ 4,40,00,138ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿ 1,43,384 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆ ಅವಯಲ್ಲಿ 20,958 ರೋಗಿಗಳು ಕೋವಿಡ್ ವೈರಸ್‍ನಿಂದ ಚೇತರಿಸಿಕೊಂಡಿದ್ದಾರೆ.
ದೇಶಾದ್ಯಂತ ಈವರೆಗೆ ಒಟ್ಟು 4,33,09,484 ಮಂದಿ ಕೊರೊನಾದಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿ ಈವರೆಗೆ 203.94 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.