ರಾಜ್ಯಗಳ ಕೋವಿಡ್ ಪೂರ್ವಸಿದ್ಧತೆ ಕುರಿತು ಕೇಂದ್ರ ಸಚಿವರಿಂದ ಪರಿಶೀಲನೆ

Social Share

ನವದೆಹಲಿ,ಡಿ.23- ಕೋವಿಡ್ ನಿಭಾಯಿಸಲು ಕೈಗೊಳ್ಳಲಾಗಿರುವ ಪೂರ್ವ ಸಿದ್ಧತೆಗಳ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸೂಕ್ ಮಾಂಡವೀಯ ಇಂದು ದೇಶದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರ ಜೊತೆ ವರ್ಚುವಲ್ ಸಭೆ ನಡೆಸಲಿದ್ದಾರೆ.

ಚೀನಾ ಹಾಗೂ ಇತರ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಕಳೆದ ಮೂರು ದಿನಗಳಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರ, ನಾಳೆಯಿಂದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ರ್ಯಾಂಡಮ್ ಮಾದರಿಗಳ ಸಂಗ್ರಹವನ್ನು ಆರಂಭಿಸಲಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗುತ್ತಿದೆ.

ಇಂದು ಮಧ್ಯಾಹ್ನ ಕೇಂದ್ರ ಸಚಿವ ಮನ್ಸೂಕ್ ಮಾಂಡವೀಯ ನಡೆಸುವ ಸಭೆಯಲ್ಲಿ ವೈದ್ಯಕೀಯ ಸೌಲಭ್ಯಗಳ ಪೂರ್ವ ತಯಾರಿ, ಹಾಸಿಗೆ, ಆಮ್ಲಜನಕ, ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ವ್ಯವಸ್ಥೆ, ಜಿಲ್ಲಾಸ್ಪತ್ರೆಗಳಲ್ಲಿನ ಸಿದ್ಧತೆ, ಟೆಲಿ ಮೆಡಿಸನ್ ಕನ್ಸಲ್ಟೆಂಟ್ ಸೇರಿದಂತೆ ಹಲವು ತಯಾರಿಗಳ ಪರಿಶೀಲನೆ ನಡೆಯಲಿದೆ.

ಒಡಿಶಾದಲ್ಲಿ ಹಾಕಿ ವಿಶ್ವಕಪ್ : ದೇಶದ ಎಲ್ಲಾ ಸಿಎಂಗಳಿಗೆ ಆಹ್ವಾನ

2020ರಲ್ಲಿ ಕೋವಿಡ್‍ನ ಸೋಂಕು ಸೃಷ್ಟಿಸಿದ ಅವಾಂತರಗಳಿಂದ ಪಾಠ ಕಲಿತಿರುವ ಸರ್ಕಾರಗಳು ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸಲು ಸರ್ವ ಸಿದ್ಧತೆಗಳನ್ನು ಕೈಗೊಂಡಿದ್ದವು. ಕಳೆದ ಎಂಟು ತಿಂಗಳಿನಿಂದ ಸೋಂಕಿನ ಪ್ರಮಾಣ ತಗ್ಗಿದ್ದರಿಂದ ಸಮರೋಪಾದಿಯಲ್ಲಿ ನಡೆದಿದ್ದ ಪೂರ್ವ ಸಿದ್ಧತೆಗಳನ್ನು ಮಂದಗೊಳಿಸಲಾಗಿತ್ತು.

ಕೋವಿಡ್ ಎರಡನೇ ಅಲೆಯ ಬಳಿಕ ಕರ್ನಾಟಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಖ್ಯೆಯನ್ನು ಎಂಟು ಸಾವಿರಕ್ಕೆ ಹೆಚ್ಚಿಸಲಾಗಿದೆ, ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿನ ಐಸಿಯು, ಆಕ್ಸಿಜನ್ ಸೌಲಭ್ಯ ಸಹಿತ ಬೆಡ್‍ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ವೈದ್ಯಕೀಯ ದ್ರವರೂಪದ ಆಮ್ಲಜನಕ ಉತ್ಪಾದನೆ ಹಾಗೂ ಸಂಗ್ರಹ ಸಾಮಥ್ರ್ಯ ಹೆಚ್ಚಾಗಿದೆ.

ಇಂದು ಮಧ್ಯಾಹ್ನದ ಸಭೆಯಲ್ಲಿ ಈವರೆಗೆ ಮೇಲ್ದರ್ಜೆಗೆರಿಸಲಾದ ವೈದ್ಯಕೀಯ ಸೌಲಭ್ಯಗಳ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಲಿದೆ. ಮತ್ತಷ್ಟು ಸೌಲಭ್ಯಗಳ ಸುಧಾರನೆಗೂ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ವಿವಿ ಆವರಣದಲ್ಲಿ ಮಾಸ್ಕ್ ಕಡ್ಡಾಯ

ದೇಶದಲ್ಲಿಂದು 163 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸೋಂಕಿನ ಪ್ರಕರಣಗಳ ಸಂಖ್ಯೆ 3380ರಷ್ಟಿ ತಗ್ಗಿವೆ. 60 ವರ್ಷ ಮೇಲ್ಪಟ್ಟ ಶೇ.60ರಷ್ಟು ಜನ ಕೋವಿಡ್ ಬೂಸ್ಟರ್ ಲಸಿಕೆ ಪಡೆದಿದ್ದಾರೆ. ಹೀಗಾಗಿ ಕೋವಿಡ್ ಬಗ್ಗೆ ಭಾರತೀಯರು ಆತಂಕ ಪಡುವ ಅಗತ್ಯ ಇಲ್ಲ. ಆದರೆ ಎಚ್ಚರಿಕೆ ಅಗತ್ಯ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಖರ್ಚಿನಲ್ಲೇ ನಾಳೆಯಿಂದ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ರ್ಯಾಂಡಮ್ ಮಾದರಿಗಳ ಸಂಗ್ರಹವನ್ನು ಆರಂಭಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿನ್ನೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ನಿಯಂತ್ರಿಸಬೇಕು, ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಎಂಬುವು ಸೇರಿದಂತೆ ಹಲವು ಸೂಚನೆಗಳನ್ನು ನೀಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಹಿರಿಯ ಅಕಾರಿಗಳ ಸಭೆ ನಡೆಸಿದ್ದರು. ಅದಕ್ಕೂ ಮೊದಲು ಕೇಂದ್ರ ಆರೋಗ್ಯ ಸಚಿವರು ಕೂಡ ಅಕಾರಿಗಳ ಸಭೆ ನಡೆಸಿ ಪರಿಶೀಲನೆ ನಡೆಸಿದರು. ಇಂದು ಕೇಂದ್ರ ಸಚಿವರು ಎರಡನೇ ಸುತ್ತಿನ ಸಭೆ ನಡೆಸಲಿದ್ದಾರೆ.

Covid-19, Mansukh Mandaviya, virtually meet, state, health ministers,

Articles You Might Like

Share This Article