ಪರ್ತ್,ಮೇ.19-ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಟ್ರಾವಿಸ್ ಹೆಡ್‌ಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ. ಐಪಿಎಲ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರರಾಗಿದ್ದ ಟ್ರಾವಿಸ್ ಹೆಡ್ ಕೋವಿಡ್‌ನಿಂದಾಗಿ ಆಸ್ಟ್ರೇಲಿಯಾದಲ್ಲೇ ಉಳಿದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಸ್ತುತ ಐಪಿಎಲ್‌ನಲ್ಲಿ ಆಡುವುದು ಅನುಮಾನವಾಗಿದೆ. ಈಗಾಗಲೆ ಸನ್ ರೈಸರ್ಸ್ ತಂಡ ಪ್ಲೇಆಫ್‌ನಿಂದ ಹೊರಬಿದ್ದಿದೆ. ಇಂದು ಮೇ 19ರಂದು ಲಕ್ಷೆ ಸೂಪರ್ ಜೈಂಟ್ಸ್ ವಿರುದ್ದ ನಡೆಯುವ ಪಂದ್ಯದಿಂದ ಅವರು ಹೊರಗುಳಿಯಲಿದ್ದಾರೆ ಎಂದು ತಂಡದ ಕೋಚ್ ಡೇನಿಯಲ್ ವೆಟ್ಟೋರಿ ಅಧಿಕೃತ ಮಾಹಿತಿ ನೀಡಿದ್ದಾರೆ.
ಸದ್ಯ ಅವರು ಆಸ್ಟ್ರೇಲಿಯಾದಲ್ಲಿದ್ದು, ಚಿಕಿತ್ಸೆ ನಂತರ ಭಾರತಕ್ಕೆ ಆಗಮಿಸಲಿದ್ದಾರೆ. ಅವರ ಆರೋಗ್ಯದ ಸ್ಥಿತಿ ನೋಡಿ ಉಳಿದ ಎರಡು ಪಂದ್ಯಗಳಿಗೆ ಅವರು ಲಭ್ಯರಿರುತ್ತಾರೆಯೇ ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಒಂದು ಪಂದ್ಯದಲ್ಲಿ ರಾಯಲ್ ಚಾಲೆಂಜಸ್ ೯ ಬೆಂಗಳೂರು (ಮೇ 23) ಮತ್ತೊಂದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಮೇ 25) ತಂಡವನ್ನು ಎದುರಿಸಲಿದೆ.