ಸಿಎಂ ಅಧ್ಯಕ್ಷತೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

Social Share

ಬೆಳಗಾವಿ,ಡಿ.22-ರಾಜ್ಯದಲ್ಲಿ ಮತ್ತೆ ಹೊಸ ಮಾದರಿಯ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳ ಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಸೇರಿದಂತೆ ಕೆಲವು ಕಡೆ ಹೊಸ ತಳಿಯ ಸೋಂಕು ಕಾಣಿಸಿಕೊಂಡಿದೆ. ಇದನ್ನು ನಿಯಂತ್ರಣ ಮಾಡಲು ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಎಂಬುದರ ಬಗ್ಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಮಂಡಿಸುತ್ತೇವೆ. ವಚ್ರ್ಯುಲ್ ಮೂಲಕ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ನಮಗೆ ಈಗಾಗಲೇ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಕೂಡ ಏನೆಲ್ಲ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೊ ಅದೆಲ್ಲವನ್ನು ತೆಗೆದುಕೊಳ್ಳುತ್ತದೆ. ಕ್ರಿಸ್‍ಮಸ್, ಹೊಸ ವರ್ಷ ಬರುತ್ತಿರುವುದರಿಂದ ಸಾರ್ವಜನಿಕರು ಕೂಡ ಮೈಮರೆಯದೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮರೆಯಬಾರದು ಎಂದು ಎಚ್ಚರಿಸಿದರು.

ಮತ್ತೆ ಕರೋನಾ ಹಾವಳಿ : ಚೀನಾ ಪರಿಸ್ಥಿತಿ ಭಾರತಕ್ಕೆ ಬರಲ್ಲ ಎಂದ ತಜ್ಞರು

ಕೋವಿಡ್ ಟೆಸ್ಟ್ ಹೆಚ್ಚಳ, ಪರೀಕ್ಷೆಗೊಳಪಡಿಸುವುದು ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ. ಸಲಹಾ ಸಮಿತಿ ಸದಸ್ಯರು ಯಾವೆಲ್ಲ ಸಲಹೆಗಳನ್ನು ನೀಡುತ್ತಾರೋ ಅದರ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಸಾರ್ವಜನಿಕರು ಅನಗತ್ಯವಾಗಿ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಕಾವೇರಿ ಹೆಸರು

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಕೊಡಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಈಗಾಗಲೇ ಸಮುದಾಯದ ಶ್ರೀಗಳ ನೇತೃತ್ವದಲ್ಲಿ ಸಭೆ ನಡೆಸಿದ್ದೇವೆ. ಪಕ್ಷಾತೀತವಾಗಿ ಎಲ್ಲರೂ ಕೂಡ ಇದಕ್ಕೆ ಬೆಂಬಲ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Covid, Advisory Committee, meeting, CM Bommai, Minister Sudhakar,

Articles You Might Like

Share This Article