ಕೋವಿಡ್ ನೆಪದಲ್ಲಿ ಚುನಾವಣೆ ಮುಂದೂಡುವ ಯತ್ನ ನಡೀತಿದೆ : ಡಿಕೆಶಿ

Social Share

ಬೆಳಗಾವಿ,ಡಿ.22- ಕೋವಿಡ್ ನೆಪವಿಟ್ಟುಕೊಂಡು ಚುನಾವಣೆ ಮುಂದೂಡುವ ಯತ್ನ ವನ್ನು ಸರ್ಕಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಬಳಿ ಚರ್ಚೆ ನಡೆಸಲಾಗಿದೆ. ಸಂಪುಟದಲ್ಲೂ ಚರ್ಚೆ ನಡೆಯುತ್ತಿದೆ. ದೆಹಲಿಯ ಪ್ರಧಾನಿ ಕಚೇರಿಯಿಂದ ದೂರವಾಣಿ ಕರೆ ಬಂದಿದೆ ಎಂಬ ಮಾಹಿತಿ ಇದೆ. ಇದೆಲ್ಲವೂ ಚುನಾವಣೆ ಮುಂದೂಡುವ ಹುನ್ನಾರ. ಅವರು ಯಾವಾಗಲಾದರೂ ಚುನಾವಣೆ ಮಾಡಲಿ ನಮ್ಮ ಪಕ್ಷ ಸಿದ್ಧವಿದೆ ಎಂದರು.

ಈ ಹಿಂದೆ ನಾವು ಮೇಕೆದಾಟು ಯಾತ್ರೆ ಮಾಡಿದಾಗ ಕೋವಿಡ್ ನೆಪದಲ್ಲಿ ನಮ್ಮ ವಿರುದ್ಧ ನಾಲ್ಕೈದು ಪ್ರಕರಣ ದಾಖಲಿಸಿದರು. ಈಗ ರಾಹುಲ್‍ಗಾಂಧಿ ಯಾತ್ರೆಗೆ ಜನ ಸೇರುವುದನ್ನು ತಪ್ಪಿಸಲು ಪ್ರಕರಣ ದಾಖಲಿಸುವ ಹುನ್ನಾರ ನಡೆದಿದೆ. ಕೋವಿಡ್ ವಿಷಯದಲ್ಲಿ ವೈಜ್ಞಾನಿಕವಾಗಿ ಯಾವುದೇ ಮಾಹಿತಿ ಇಲ್ಲ. ಆದರೆ ಪ್ರತಿಪಕ್ಷಗಳ ಜನಪ್ರಿಯ ಕಾರ್ಯಕ್ರಮಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಒಡಿಶಾ ಕರಾವಳಿಯಲ್ಲಿ ಡಾಲ್‍ಫಿನ್ ಗಣತಿ ಆರಂಭ

ಸಹಕಾರ ಇಲಾಖೆಯಲ್ಲಿ ಸಾಲ ನೀಡುವುದರಿಂದ ಆರಂಭಿಸಿ ಎಲ್ಲಾ ವಿಷಯಗಳಲ್ಲೂ ಭ್ರಷ್ಟಚಾರ ನಡೆಯುತ್ತಿದೆ. ಸಕ್ಕರೆ ಕಾರ್ಖಾನೆಗಳಿಗೆ ನೀಡಿದ ಸಾಲ ವಸೂಲಿಯಾಗುತ್ತಿಲ್ಲ. ಭ್ರಷ್ಟಚಾರಕ್ಕೆ, ಸಾಲದ ಹಗರಣಗಳಿಗೆ ಸಚಿವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಉಪಕುಲಪತಿ ಹುದ್ದೆಗೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂಬ ಬಿಜೆಪಿ ಸಂಸದ ಪ್ರತಾಪಸಿಂಹ ಹೇಳಿದ್ದಾರೆ. ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ ಸಂಸದರು ಹೇಳಿದ್ದಾರೆ.

ಸರ್ಕಾರದಲ್ಲಿ ಯಾರಿಗೆ ಈ ಹಣ ತಲುಪಿದೆ? ಮಂತ್ರಿಗಳಿಗೆ ತಲುಪಿದೆಯೋ? ಅಧಿಕಾರಿಗಳಿಗೆ ತಲುಪಿದೆಯೋ? ಎಂಬುದು ಚರ್ಚೆ ಆಗಬೇಕು. ಅದಕ್ಕಾಗಿ ವಿಧಾನ ಪರಿಷತ್ ನಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿದೆ. ಕೂಡಲೇ ಲೋಕಾಯುಕ್ತ, ಇಡಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. ನಮ್ಮ ಮೇಲೆ ದಾಳಿ ಮಾಡಿ ತನಿಖೆ ಮಾಡುವವರು ಇವರ ಹೇಳಿಕೆ ವಿಚಾರದಲ್ಲೂ ತನಿಖೆ ಮಾಡಬೇಕು. ಸಿಬಿಐನವರು ನನ್ನ ಜತೆ ವ್ಯವಹಾರ ಇಟ್ಟುಕೊಂಡವರಿಗೆಲ್ಲ ನೊಟೀಸ್ ನೀಡಿ ವಿಚಾರಣೆ ಮಾಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ನಾಳೆ ಚರ್ಚೆ ಆಗಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ.

ಶಿಕ್ಷಣ ವ್ಯವಸ್ಥೆಯ ಹುದ್ದೆ ಮಾರಾಟ ಭ್ರಷ್ಟಾಚಾರದ ವಿಚಾರವಾಗಿದ್ದು, ಬಿಜೆಪಿ ಸಂಸದರು ಹೇಳಿರುವ ವಿಚಾರವನ್ನು ನಾವು ಚರ್ಚೆ ಮಾಡದಿದ್ದರೆ ನಮ್ಮ ಕರ್ತವ್ಯದಲ್ಲಿ ಲೋಪ ಆಗಲಿದೆ. ಹೀಗಾಗಿ ಈ ವಿಚಾರ ತನಿಖೆ ಆಗಬೇಕು, ಜನರಿಗೆ ವಿಚಾರ ತಿಳಿಯಬೇಕು.

ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಟೀಕೆಯನ್ನು ಸಮರ್ಥಿಸಿಕೊಂಡ ಡಿ.ಕೆ.ಶಿವಕುಮಾರ್ ಅವರು, ನಮ್ಮ ಪಕ್ಷದ ಅಧ್ಯಕ್ಷರು ಹೇಳಿರುವುದು ನೂರಕ್ಕೆ ನೂರಷ್ಟು ಸತ್ಯವಿದೆ. ಸ್ವತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಯಾರೊಬ್ಬರು ಬಲಿದಾನವಾಗಿಲ್ಲ ಎಂದರು.

ಸಿಎಂ ಅಧ್ಯಕ್ಷತೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

ಸೋನಿಯಾ ಗಾಂಧಿ ವಿರುದ್ಧವಾಗಿ ಮಾತನಾಡುತ್ತಿರುವ ಬಿಜೆಪಿಯವ ಹೇಳಿಕೆಗಳು ಸಭ್ಯತೆಯ ಎಲ್ಲೆ ಮೀರಿವ. ಸಂಸ್ಕøತಿ ಗೊತ್ತಿಲ್ಲದ ಬಿಜೆಪಿಯವರು ಸೋನಿಯಾ ಗಾಂಧಿಯವರನ್ನು ಇಟಲಿ ಪ್ರಜೆ ಎಂದು ಟೀಕಿಸುತ್ತಿದ್ದಾರೆ. ಮದುವೆಯಾಗಿ ಮನೆಗೆ ಬಂದ ಹೆಣ್ಣು ಮಗಳು ಮನೆ ಮಗಳಾಗಿರುತ್ತಾಳೆ. ಈ ಸಂಸ್ಕøತಿಯ ಅರಿವಿಲ್ಲದ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದಕ್ಕೆ ಜನ ತಕ್ಕ ಉತ್ತರ ನೀಡುತ್ತಾರೆ ಎಂದರು.

Covid, government, postpone, elections, KPCC President, DK Shivakumar,

Articles You Might Like

Share This Article