ಬೆಂಗಳೂರು,ಡಿ.14- ಕೋವಿಡ್ ಕಾಲದಲ್ಲಿ ನಡೆದಿರುವ ಅವ್ಯವಹಾರಗಳಿಗೆ ಸಂಬಂಧಪಟ್ಟಂತೆ ದೂರು ಆಧರಿಸಿ ಕಾನೂನು ರೀತಿಯ ಕ್ರಮ ಜರುಗಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸ್ಪಷ್ಟಪಡಿಸಿದ್ದಾರೆ.ಈ ಸಂಜೆಯೊಂದಿಗೆ ಮಾತನಾಡಿದ ಅವರು, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಯಾವ ರೀತಿ ತನಿಖೆ ಎಂಬುದನ್ನು ಸರ್ಕಾರ ನಿರ್ಧರಿಸಲಿದೆ. ಈವರೆಗೂ ಎಸ್ಐಟಿ ರಚನೆಯಾಗಿಲ್ಲ. ಹೀಗಾಗಿ ವಿಧಾನಸೌಧ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ಮಟ್ಟದಲ್ಲಿ ಉಪಮುಖ್ಯಮಂತ್ರಿ, ಗೃಹಸಚಿವರು, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರನ್ನೊಳಗೊಂಡ ಉಪಸಮಿತಿ ನ್ಯಾಯಮೂರ್ತಿ ಮೈಕಲ್ ಕುನ್ಹ ಅವರ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಪರಿಶೀಲಿಸುತ್ತಿದೆ. ವರದಿಯಲ್ಲಿನ ಅಂಶಗಳನ್ನು ಆಧರಿಸಿ ದೂರು ನೀಡಲಾಗಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.