ನೆಲಮಂಗಲ,ಆ.11– ರಸ್ತೆ ಮಧ್ಯದಲ್ಲೇ ಕಿಡಿಗೇಡಿಗಳು ಎರಡು ಹಸುಗಳ ಕತ್ತು ಕೊಯ್ದು ಹತ್ಯೆ ಮಾಡಿ ವಿಕೃತಿ ಮೆರೆದಿರುವ ಘಟನೆ ತಾಲ್ಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದ ರಸ್ತೆಮಧ್ಯದಲ್ಲಿ ರಕ್ತದ ಮಡುವಿನಲ್ಲಿ ಎರಡು ಹಸುಗಳು ಬಿದ್ದಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಹಸುಗಳ ಬಳಿ ಹೋಗಿ ನೋಡಿದಾಗ ಅಮಾನುಷವಾಗಿ ಕಿಡಿಗೇಡಿಗಳು ಕತ್ತು ಕೊಯ್ದು ಹತ್ಯೆಗೈದು ರಸ್ತೆ ಮಧ್ಯೆ ಎಸೆದು ಹೋಗಿರುವುದು ಬೆಳಕಿಗೆ ಬಂದಿದೆ.
ಕೂಡಲೇ ನೆಲಮಂಗಲ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೂಕ ಜೀವಿ ಹಸುಗಳನ್ನು ಹತ್ಯೆಗೈದು ವಿಕೃತಿ ಮೆರೆದಿದ್ದ
ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಘಟನೆಯಿಂದ ಇಡೀ ಗ್ರಾಮದಲ್ಲೇ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರೈತರು ತಮ ಜಾನುವಾರುಗಳನ್ನು ರಕ್ಷಿಸಿಕೊಳ್ಳುವುದೇ ಒಂದು ಸವಾಲಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತೆರೆಡೆ ಹಾಲು ಕೊಡುವ ಕಾಮಧೇನುಗಳ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವ ಬೆನ್ನಲ್ಲೇ ಇದೀಗ ನೆಲಮಂಗಲದಲ್ಲಿ ಮೂಕಪ್ರಾಣಿಗಳ ಕತ್ತು ಕೊಯ್ದು ಹತ್ಯೆಗೈದಿರುವುದು ವಿಷಾದನೀಯ.
- ರಕ್ತದ ಕ್ಯಾನ್ಸರ್ ರೋಗಿಗಳಿಗೆ ಆಶಾಕಿರಣವಾದ “ಕಾರ್ ಟಿ-ಸೆಲ್ ಥೆರಪಿ”: ಕಿರಣ್ ಮಂಜುಂದಾರ್ ಶಾ
- ಕೆ.ಎನ್.ರಾಜಣ್ಣ ತಲೆದಂಡ : ಸಚಿವ ಸ್ಥಾನದ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು
- ಸಚಿವ ಶಿವರಾಜ್ ತಂಗಡಗಿ ವಿರುದ್ಧ ಸ್ಪೀಕರ್ ಖಾದರ್ ಗರಂ
- ಸ್ಮಾರ್ಟ್ ಮೀಟರ್ ಅವ್ಯವಹಾರ : ಮೇಲ್ಮನೆಯಲ್ಲಿ ಗದ್ದಲ-ಕೋಲಾಹಲ
- ಗೋ ಹತ್ಯೆಗೈದು ವಿಕೃತಿ ಮೆರೆದ ಕಿಡಿಗೇಡಿಗಳು