Friday, November 22, 2024
Homeರಾಜಕೀಯ | Politicsಕಮಲ ಬಿಟ್ಟು 'ಕೈ'ಹಿಡಿದ ಯೋಗೇಶ್ವರ್ ನಡೆಗೆ ಮಿಶ್ರ ಪ್ರತಿಕ್ರಿಯೆ

ಕಮಲ ಬಿಟ್ಟು ‘ಕೈ’ಹಿಡಿದ ಯೋಗೇಶ್ವರ್ ನಡೆಗೆ ಮಿಶ್ರ ಪ್ರತಿಕ್ರಿಯೆ

CP Yogeshwar Join Congress

ಬೆಂಗಳೂರು,ಅ.23- ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ರಾಜಕೀಯ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತ್ಯೇಕವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ , ಯೋಗೇಶ್ವರ್ ನಿರ್ಧಾರವನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಯಡಿಯೂರಪ್ಪ ಮಾತನಾಡಿ, ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದನ್ನು ನೋಡಿದ್ದೇನೆ. ತೀರ್ಮಾನ ಅವರಿಗೆ ಬಿಟ್ಟಿದ್ದು. ಇಲ್ಲೇ ಇರಿ ಸೀಟು ಕೊಡುತ್ತೇವೆ ಎಂದು ಹೇಳಿದ್ದೆವು. ಆದರೆ ಆದ್ರೆ ಕಾಂಗ್ರೆಸ್ ಸೇರಿದ್ದಾರೆ. ಯೋಗೇಶ್ವರ್ಗೆ ಒಳ್ಳೆದಾಗಲಿ ಎಂದು ಹಾರೈಸಿದ್ದಾರೆ.

ಇತ್ತ ಕೇಂದ್ರ ಸಚಿವ ವಿ.ಸೋಮಣ್ಣ ಮಾತನಾಡಿ, ಯೋಗೇಶ್ವರ್ಗೆ ನಾವು ಎಲ್ಲಾ ರೀತಿಯ ಸ್ಥಾನಮಾನವನ್ನು ನೀಡಿದ್ದೆವು. ವಿಧಾನಪರಿಷತ್ ಸದಸ್ಯತ್ವ ಸೇರಿದಂತೆ ಪಕ್ಷದಲ್ಲಿರುವ ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗಿತ್ತು. ಆದರೆ ಅವರು ಆತುರವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ನಾವು ಚನ್ನಪಟ್ಟಣ ಕ್ಷೇತ್ರದಿಂದ ಅವರನ್ನೇ ಅಭ್ಯರ್ಥಿ ಮಾಡುವ ಪ್ರಯತ್ನವನ್ನು ನಡೆಸಿದ್ದೆವು. ಹೀಗಾಗಿಯೇ ಕುಮಾರಸ್ವಾಮಿಯವರನ್ನು ಮನವೊಲಿಸುವ ಪ್ರಯತ್ನವನ್ನು ನಡೆಸಲಾಗಿತ್ತು. ಯೋಗೇಶ್ವರ್ಗೆ ತಾಳೆ ಇರಲಿಲ್ಲ ಎಂದು ಕಿಡಿಕಾರಿದರು.

ರಾಜಕಾರಣದಲ್ಲಿ ಕೆಲವು ಬಾರಿ ತಾಳೆ, ಸಹನೆ ಅತ್ಯಗತ್ಯ. ಅನೇಕ ಬಾರಿ ನಾವು ಬಯಸುವುದೇ ಒಂದು, ವಾಸ್ತವದಲ್ಲಿ ಆಗುವುದು ಇನ್ನೊಂದು. ತಾಳೆ ಇಲ್ಲದಿದ್ದರೆ ಯಶಸ್ವಿಯಾಗಲು ಸಾಧ್ಯವಿಲ್ಲ. ಯೋಗೇಶ್ವರ್ ದುಡುಕಿ ನಿರ್ಧಾರ ತೆಗೆದುಕೊಂಡಿದ್ದಾರೆ ಎನಿಸುತ್ತದೆ. ಆದರೂ ಅವರಿಗೆ ಒಳ್ಳೆಯದಾಗಲಿ ಎಂದು ಸೋಮಣ್ಣ ಹೇಳಿದರು.

RELATED ARTICLES

Latest News