ಕಮಲ ಬಿಟ್ಟು ‘ಕೈ’ಹಿಡಿದ ಯೋಗೇಶ್ವರ್ ನಡೆಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು,ಅ.23- ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ರಾಜಕೀಯ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರತ್ಯೇಕವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ , ಯೋಗೇಶ್ವರ್ ನಿರ್ಧಾರವನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಯಡಿಯೂರಪ್ಪ ಮಾತನಾಡಿ, ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದನ್ನು ನೋಡಿದ್ದೇನೆ. ತೀರ್ಮಾನ ಅವರಿಗೆ ಬಿಟ್ಟಿದ್ದು. ಇಲ್ಲೇ ಇರಿ ಸೀಟು ಕೊಡುತ್ತೇವೆ ಎಂದು ಹೇಳಿದ್ದೆವು. … Continue reading ಕಮಲ ಬಿಟ್ಟು ‘ಕೈ’ಹಿಡಿದ ಯೋಗೇಶ್ವರ್ ನಡೆಗೆ ಮಿಶ್ರ ಪ್ರತಿಕ್ರಿಯೆ