ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ

ಬೆಂಗಳೂರು,ಅ.23- ಕಾಂಗ್ರೆಸ್‌‍ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ಯೋಗೇಶ್ವರ್‌, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಈ ದಿನ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕೆಂದು ಕೋರಿದ್ದಾರೆ. ಇಲ್ಲಿಯವರೆಗೆ ತಾವು ನನಗೆ ನೀಡಿದ ಸಹಕಾರಕ್ಕೆ ವಂದನೆಗಳು ಎಂದು ಯೋಗೇಶ್ವರ್‌ ವಿಜಯೇಂದ್ರಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಈ ಪತ್ರವನ್ನು ವಾಟ್ಸಪ್‌ ಮೂಲಕ ಕಳುಹಿಸಿಕೊಟ್ಟಿದ್ದಾರೆ. ಮೂರು ದಿನಗಳ ಹಿಂದೆ ಯೋಗೇಶ್ವರ್‌ ವಿಧಾನಪರಿಷತ್‌ ಸದಸ್ಯತ್ವಕ್ಕೂ … Continue reading ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ