ಬೆಂಗಳೂರು, ಡಿ.5- ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಮೂವರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 10.5 ಲಕ್ಷ ರೂ. ನಗದು ಹಾಗೂ ಮೂರು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಸ್ಥಳಗಳಲ್ಲಿ ಲಾಡ್ರ್ಸ್ ಎಕ್ಸಾರ್ಚ್ ಎಂಬ ಆಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿ ಜೂಜಾಟ ನಡೆಸುತ್ತಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಇಂಗ್ಲೆಂಡ್ ಮತ್ತು ಪಾಕಿಸ್ತಾನ ದೇಶಗಳ ನಡುವೆ ನಡೆದ ಕ್ರಿಕೆಟ್ ಟೆಸ್ಟ್ ಪಂದ್ಯಗಳಿಗೆ ಸಂಬಂಧಿಸಿದಂತೆ ತಂಡಗಳ ಸೋಲು ಮತ್ತು ಗೆಲುವಿನ ಬಗ್ಗೆ ಪಂಟರ್‍ಗಳಿಂದ ಹಣವನ್ನು ಪಣವಾಗಿ ಸಂಗ್ರಹಿಸಿರುವ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದರು.
ಮಿನಿ ವ್ಯಾನ್ ಮಗುಚಿ ಬಿದ್ದು ನಾಲ್ವರು ಅಯ್ಯಪ್ಪ ಭಕ್ತರ ಸಾವು
ಸಿಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿದಾಗ ಒಬ್ಬಾತ ಸ್ಥಳದಿಂದ ಪರಾರಿಯಾಗಿದ್ದು, ಮೂವರನ್ನು ವಶಕ್ಕೆ ಪಡೆದು ಕ್ರಿಕೆಟ್ ಬೆಟ್ಟಿಂಗ್‍ಗೆ ಬಳಸಿದ್ದ 10.5 ಲಕ್ಷ ರೂ. ಹಣ ಮತ್ತು ಮೂರು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದೆ.
ತಲೆಮರೆಸಿಕೊಂಡಿರುವ ಆರೋಪಿ ಸೇರಿದಂತೆ ನಾಲ್ವರ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಮೂವರು ಆರೋಪಿಗಳ ಬಂಧನ, 5 ಲಕ್ಷ ಮೌಲ್ಯದ ಮಾಲು ಜಪ್ತಿ
ಈ ಕಾರ್ಯಾಚರಣೆಯನ್ನು ಕೇಂದ್ರ ಅಪರಾಧ ವಿಭಾಗದ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿ ನಡೆಸಿರುತ್ತಾರೆ.
Cricket, betting, three, bookies, arrested, CCB police,