Monday, May 6, 2024
Homeಕ್ರೀಡಾ ಸುದ್ದಿಶಿಖರ್ ಧವನ್- ಆಯೇಷಾ ದಾಂಪತ್ಯ ಜೀವನ ಅಂತ್ಯ

ಶಿಖರ್ ಧವನ್- ಆಯೇಷಾ ದಾಂಪತ್ಯ ಜೀವನ ಅಂತ್ಯ

ನವದೆಹಲಿ,ಅ.5- ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಎಡಗೈ ಆಟಗಾರ ಶಿಖರ್ ಧವನ್ ದಾಂಪತ್ಯ ಜೀವನ ಕೊನೆಗೊಂಡಿದೆ. ಶಿಖರ್ ಧವನ್ ಅವರು ತಮ್ಮ ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದು, ದೆಹಲಿಯ ಪಟಿಯಾಲ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನಕ್ಕೆ ಅನುಮತಿ ಕೊಟ್ಟಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಶಿಖರ್ ಧವನ್, ಪತ್ನಿ ಆಯೇಷಾ ಮುಖರ್ಜಿ ಅವರಿಂದ ವರ್ಷಗಟ್ಟಲೆ ಮಾನಸಿಕ ಹಿಂಸೆ ಅನುಭವಿಸಿದ್ದಾರೆ ಎಂದು ಅಭಿಪ್ರಾಯಪಟ್ಟು ವಿಚ್ಛೇದನ ಮಂಜೂರು ಮಾಡಿದೆ. ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಧಿಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದು, ತಮ್ಮ ಆದೇಶದಲ್ಲಿ, ಧವನ್ ಅವರ ಪತ್ನಿ ತಮ್ಮ ಮೇಲಿನ ಆರೋಪಗಳನ್ನು ವಿರೋಧಿಸಲ್ಲೂ ಇಲ್ಲ ಅಥವಾ ಸ್ವತಃ ಸಮರ್ಥಿಸಿಕೊಳ್ಳಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

2012ರಲ್ಲಿ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆಯೇಷಾ ಅವರಿಗೆ ಇದು ಎರಡನೇ ಮದುವೆ ಆಗಿತ್ತು. ಈ ಇಬ್ಬರು ದಂಪತಿಗಳಿಗೆ ಒಬ್ಬ ಮಗನಿದ್ದು, ಮಗನ ಖಾಯಂ ಕಸ್ಟಡಿಯ ಕುರಿತು ಯಾವುದೇ ಆದೇಶವನ್ನು ನೀಡಲು ನ್ಯಾಯಾಲಯ ನಿರಾಕರಿಸಿದೆ.

ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಮಧ್ಯಪ್ರದೇಶ ಸರ್ಕಾರ

ನ್ಯಾಯಾಲಯವು ಧವನ್‍ಗೆ ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ತನ್ನ ಮಗನನ್ನು ಭೇಟಿಯಾಗುವ ಹಕ್ಕು ನೀಡಿದ್ದು, ಮಗನೊಂದಿಗೆ ವೀಡಿಯೊ ಕರೆ ಮೂಲಕ ಮಾತುಕತೆ ನಡೆಸುವುದಕ್ಕೂ ಅನುಮತಿ ನೀಡಿದೆ. ಇದಲ್ಲದೆ ಮಗನ ಶಾಲಾ ರಜೆಯ ಅವಧಿಯ ಕನಿಷ್ಠ ಅರ್ಧದಷ್ಟು ರಜೆಯನ್ನು ಧವನ್ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಕಳೆಯಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಧವನ್ ಕುಟುಂಬದೊಂದಿಗೆ ರಾತ್ರಿಯ ತಂಗುವಿಕೆ ಸೇರಿದಂತೆ ಭೇಟಿ ಉದ್ದೇಶಗಳಿಗಾಗಿ ಮಗುವನ್ನು ಭಾರತಕ್ಕೆ ಕರೆತರುವಂತೆ ಆಯೇಷಾ ಅವರಿಗೆ ನ್ಯಾಯಾಲಯ ಆದೇಶಿಸಿದೆ.

RELATED ARTICLES

Latest News